ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿದ್ದರಾಮಯ್ಯ
ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ನೀಡುವಂತೆ ಆ ಭಾಗದ ಜನರು ಬಹು ದಿನಗಳಿಂದ ಬೇಡಿಕೆ ಇಡುತ್ತಲೇ ಬಂದಿದ್ದಾರೆ. ಪ್ರತ್ಯೇಕ ಸಚಿವಾಲಯ ನಿರ್ಮಾಣಕ್ಕೆ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಆದರೆ ಇನ್ನೂವರೆಗೂ ಕಾರ್ಯರೂಪಕ್ಕೆ ಬಂದಿಲ್ಲ. ಹಾಗೇ ತೊಗರಿ ಬೆಳೆಗೆ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ತೊಗರಿ ಬೆಳೆಗಾರರ ಆಗ್ರಹವಾಗಿದೆ. ಈ ಎರಡು ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.
ಕಲಬುರಗಿ, ಡಿಸೆಂಬರ್ 22: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ (Ministery) ರಚಿಸುವ ಉದ್ದೇಶ ಇದೆ. ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆ ಈ ಹಿಂದೆಯೂ ನಾವು ಹೇಳಿದ್ದೇವೆ. ಬಹಳ ವರ್ಷಗಳಿಂದ ಪ್ರತ್ಯೇಕ ಸಚಿವಾಲಯದ ಬೇಡಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹೇಳಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತೊಗರಿ ಬೆಳೆಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸುವಂತೆ ರೈತರ ಬೇಡಿಕೆಯಿದೆ. ತೊಗರಿ ಬೆಳೆ ಸ್ಥಿತಿಗತಿ ವರದಿ ಕೇಳಿದ್ದೇವೆ. ವರದಿ ಬಂದ ಬಳಿಕ ಆ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ: ಕಲಬುರಗಿ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆ, ಇಲ್ಲಿದೆ ವಿಶೇಷತೆ
ಕಲ್ಯಾಣ ಕರ್ನಾಟಕ ಆರೋಗ್ಯ ವ್ಯವಸ್ಥೆಯಲ್ಲಿ ಜಯದೇವ ಆಸ್ಪತ್ರೆ ಮಹತ್ವದ್ದು. ಮಲ್ಲಿಕಾರ್ಜುನ ಖರ್ಗೆ ಹೋರಾಟದ ಫಲವಾಗಿ 371(ಜೆ) ಜಾರಿಯಾಗಿದೆ. 371 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಉದ್ಘಾಟಿಸಿದ್ದೇವೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸಲು ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ