ಮುಡಾ ಸಂಕಷ್ಟದ ಮಧ್ಯ ಸಿಎಂ ವಿದ್ಯುತ್ ಸ್ಥಾವರ ಲೋಕಾರ್ಪಣೆ, ಎಲ್ಲಾ ನೌಕರರಿಗೆ ಬೋನಸ್ ಘೋಷಣೆ

|

Updated on: Sep 24, 2024 | 8:36 PM

ಪತ್ನಿ ಹೆಸರಿಗೆ 14 ಮುಡಾ ನಿವೇಶನ ಹಂಚಿಕೆ ಪ್ರಕರಣ ಸಿಎಂ ಸಿದ್ದರಾಮಯ್ಯ ನಿದ್ದೆಗೆಡಿಸಿದೆ. ಆದರೂ ಸಿಎಂ ಸಿದ್ದರಾಮಯ್ಯ ಇಂದು ಸಂಜೆ ಕೆಪಿಟಿಸಿಎಲ್ ನೈಸರ್ಗಿಕ ಆಧಾರಿತ 370 ಮೆಗಾವ್ಯಾಟ್ ಸಾಮರ್ಥ್ಯದ ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆಗೊಳಿಸಿದರು. ಅಲ್ಲದೇ ಎಲ್ಲ ಕಾರ್ಮಿಕರಿಗೆ 5 ಸಾವಿರ ಬೋನಸ್ ಘೋಷಿಸಿದರು.

ಬೆಂಗಳೂರು, (ಸೆಪ್ಟೆಂಬರ್ 24): ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17 ಎ ಅಡಿ ರಾಜ್ಯಪಾಲರು ನೀಡಿರುವ ಅನುಮತಿಯನ್ನು ಎತ್ತಿಹಿಡಿದಿರುವ ಹೈಕೋರ್ಟ್ ಸಿಎಂ ಅರ್ಜಿಯನ್ನು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣ ಸಿಎಂ ಸಿದ್ದರಾಮಯ್ಯ ನಿದ್ದೆಗೆಡಿಸಿದೆ. ಆದರೂ ಸಹ ಸಿಎಂ ಸಿದ್ದರಾಮಯ್ಯ ಸಹ ಇಂದು ಸಂಜೆ ಬೆಂಗಳೂರಿನ ಕೆಪಿಟಿಸಿಎಲ್ ನೈಸರ್ಗಿಕ ಆಧಾರಿತ 370 ಮೆಗಾವ್ಯಾಟ್ ಸಾಮರ್ಥ್ಯದ ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ವೇಳೆ ಈ ಪ್ಲಾಂಟ್ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದು, ಇದೇ ಖುಷಿಯಲ್ಲಿ ಎಲ್ಲ ಕಾರ್ಮಿಕರಿಗೆ 5 ಸಾವಿರ ಬೋನಸ್ ಕೊಡುತ್ತೇವೆ ಎಂದು ಘೋಷಣೆ ಮಾಡಿದರು.

Follow us on