ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ವಿಚಾರಿಸಲು ವಿಜಯಪುರಕ್ಕೆ ಆಗಮಿಸಿದ ಸಿದ್ದರಾಮಯ್ಯ
ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಸ್ವಾಮೀಜಿಯವರ ಆರೋಗ್ಯ ವಿಚಾರಿಸಲು ಹೆಲಿಕಾಪ್ಟರ್ ನಲ್ಲಿ ವಿಜಯಪುರಕ್ಕೆ ಆಗಮಿಸಿದರು.
ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (Sri Siddeshwara Swamiji) ಅವರ ಆರೋಗ್ಯ ವಿಚಾರಿಸಲು ಗಣ್ಯರು ಆಶ್ರಮಕ್ಕೆ ಆಗಮಿಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದು ಹೋಗಿದ್ದನ್ನು ಮತ್ತು ಪ್ರಧಾನಿ ನರೇಂದ್ರ ಮೋದಿ (PM Narendra Modi) ಫೋನ್ ಮಾಡಿದ್ದನ್ನು ಈಗಾಗಲೇ ವರದಿ ಮಾಡಿದ್ದೇವೆ. ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸಹ ಸ್ವಾಮೀಜಿಯವರ ಆರೋಗ್ಯ ವಿಚಾರಿಸಲು ಹೆಲಿಕಾಪ್ಟರ್ ನಲ್ಲಿ ವಿಜಯಪುರಕ್ಕೆ ಆಗಮಿಸಿದರು. ತಮ್ಮನ್ನು ಸುತ್ತುವರಿದ ಬೆಂಬಲಿಗರಿಂದ ತಪ್ಪಿಸಿಕೊಂಡು ಸಿದ್ದರಾಮಯ್ಯನವರು ಧಾವಂತದಲ್ಲಿ ಕಾರು ಹತ್ತಿ ಆಶ್ರಮದ ಕಡೆ ಹೊರಟರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Latest Videos