ಮೆಟ್ರೋ ನಿಲ್ದಾಣಕ್ಕೆ ‘ಸೈಂಟ್ ಮೇರಿ’ ಹೆಸರು: ಕೇಂದ್ರಕ್ಕೆ ಶಿಫಾರಸ್ಸು ಮಾಡ್ತೀನಿ ಎಂದ ಸಿದ್ದರಾಮಯ್ಯ
ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣವೊಂದಕ್ಕೆ 'ಸೈಂಟ್ ಮೇರಿ' ಎಂದು ಹೆಸರಿಡುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮ್ಮತಿ ಸೂಚಿಸಿದ್ದಾರೆ. ಬೆಂಗಳೂರಿನ ಶಿವಾಜಿನಗರದಲ್ಲಿ ಇಂದು (ಸೆಪ್ಟೆಂಬರ್ 08) ಸೈಂಟ್ ಮೇರಿ ಮಾತೆ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರು ನಗರದಲ್ಲಿನ ಒಂದು ಮೆಟ್ರೋ ನಿಲ್ದಾಣಕ್ಕೆ 'ಸೆಂಟ್ ಮೇರಿ' ಎಂಬ ಹೆಸರಿಡಬೇಕು ಎಂಬ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಗರದ ಒಂದು ಮೆಟ್ರೋ ನಿಲ್ದಾಣಕ್ಕೆ ಸೈಂಟ್ ಮೇರಿ ಹಸರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು. ಇದಕ್ಕೆ ಅನುಮೋದನೆ ದೊರೆತ ನಂತರ ನಾವು ಘೋಷಣೆ ಮಾಡುವುದಾಗಿ ಭರವಸೆ ನೀಡಿದರು.
ಬೆಂಗಳೂರು, (ಸೆಪ್ಟೆಂಬರ್ 08): ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣವೊಂದಕ್ಕೆ ‘ಸೈಂಟ್ ಮೇರಿ’ ಎಂದು ಹೆಸರಿಡುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮ್ಮತಿ ಸೂಚಿಸಿದ್ದಾರೆ. ಬೆಂಗಳೂರಿನ ಶಿವಾಜಿನಗರದಲ್ಲಿ ಇಂದು (ಸೆಪ್ಟೆಂಬರ್ 08) ಸೈಂಟ್ ಮೇರಿ ಮಾತೆ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರು ನಗರದಲ್ಲಿನ ಒಂದು ಮೆಟ್ರೋ ನಿಲ್ದಾಣಕ್ಕೆ ‘ಸೆಂಟ್ ಮೇರಿ’ ಎಂಬ ಹೆಸರಿಡಬೇಕು ಎಂಬ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಗರದ ಒಂದು ಮೆಟ್ರೋ ನಿಲ್ದಾಣಕ್ಕೆ ಸೈಂಟ್ ಮೇರಿ ಹಸರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು. ಇದಕ್ಕೆ ಅನುಮೋದನೆ ದೊರೆತ ನಂತರ ನಾವು ಘೋಷಣೆ ಮಾಡುವುದಾಗಿ ಭರವಸೆ ನೀಡಿದರು.
Latest Videos

