ಪೇಸಿಎಮ್ ಅಭಿಯಾನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಶೋಭೆ ನೀಡದು: ಬಿ ಎಸ್ ಯಡಿಯೂರಪ್ಪ
ಕಾಂಗ್ರೆಸ್ ಆಡಳಿತಾವಧಿಯಲ್ಲಿ ಅನೇಕ ಹಗರಣಗಳು ನಡೆದಿವೆ, ಹಾಗಾಗೇ ನಾಡಿನಾದ್ಯಂತ ಜನ ಆ ಪಕ್ಷವನ್ನು ತಿರಸ್ಕರಿಸಿದ್ದಾರೆ. ಕೇಂದ್ರ ಮತ್ತು ಹಲವಾರು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸ್ವಚ್ಛ ಆಡಳಿತವನ್ನು ನೀಡುತ್ತಿದೆ ಎಂದು ಬಿಎಸ್ವೈ ಹೇಳಿದರು.
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು (BS Yediyurappa) ಮಂಗಳವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಪೇಸಿಎಮ್ ಅಭಿಯಾನವನ್ನು ಖಂಡಿಸಿದರು. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಅನೇಕ ಹಗರಣಗಳು ನಡೆದಿವೆ, ಹಾಗಾಗೇ ನಾಡಿನಾದ್ಯಂತ ಜನ ಆ ಪಕ್ಷವನ್ನು ತಿರಸ್ಕರಿಸಿದ್ದಾರೆ. ಕೇಂದ್ರ ಮತ್ತು ಹಲವಾರು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸ್ವಚ್ಛ ಆಡಳಿತವನ್ನು ನೀಡುತ್ತಿದೆ. ಪೇಸಿಎಮ್ ನಂಥ ಅಭಿಯಾನ ನಡೆಸುವುದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ (DK Shivakumar) ಅವರಿಗೆ ಶೋಭೆ ನೀಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದರು.