ಬ್ರೇಕ್ ಫಾಸ್ಟ್​​ಗೆ​​ ತಮ್ಮ ಮನೆಗೆ ಬರುವ ಡಿಕೆಶಿಗೆ ಮೊದಲೇ ತಮ್ಮ ನಿಲುವು ತಿಳಿಸಿದ ಸಿಎಂ

Updated on: Nov 28, 2025 | 10:59 PM

ಕರ್ನಾಟಕದಲ್ಲಿ ಸಿಎಂ ಸ್ಥಾನಕ್ಕಾಗಿ ಕಿತ್ತಾಟ ನಡೆಯುತ್ತಿದೆ. ಸಿಎಂ ಸ್ಥಾನವನ್ನು ಈಗ ತಮಗೆ ನೀಡಬೇಕೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪಟ್ಟು ಹಿಡಿದಿದ್ದಾರೆ. ಆದರೇ, ಬಾಕಿ ಉಳಿದ ಎರಡೂವರೆ ವರ್ಷಗಳ ಅವಧಿಗೂ ತಾವೇ ಸಿಎಂ ಆಗಿ ಮುಂದುವರಿದು ಅವಧಿ ಪೂರ್ಣಗೊಳಿಸುತ್ತೇನೆ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಇದು ಕಾಂಗ್ರೆಸ್ ಹೈಕಮ್ಯಾಂಡ್‌ಗೂ ದೊಡ್ಡ ತಲೆನೋವಾಗಿದೆ. ಅಂತಿಮವಾಗಿ ಈ ಕುರ್ಚಿ ಕದನದಲ್ಲಿ ಹೈಕಮಾಂಡ್ ಮಧ್ಯೆ ಪ್ರವೇಶಿಸಿದ್ದು. ಡಿಸಿಎಂ ಡಿಕೆಶಿ ಅವರನ್ನು ತಮ್ಮ ನಿವಾಸಕ್ಕೆ ಕರೆದು ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚಿಸಿದ್ದಾರೆ.

ಬೆಂಗಳೂರು, (ನವೆಂಬರ್ 28): ಕರ್ನಾಟಕದಲ್ಲಿ ಸಿಎಂ ಸ್ಥಾನಕ್ಕಾಗಿ ಕಿತ್ತಾಟ ನಡೆಯುತ್ತಿದೆ. ಸಿಎಂ ಸ್ಥಾನವನ್ನು ಈಗ ತಮಗೆ ನೀಡಬೇಕೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪಟ್ಟು ಹಿಡಿದಿದ್ದಾರೆ. ಆದರೇ, ಬಾಕಿ ಉಳಿದ ಎರಡೂವರೆ ವರ್ಷಗಳ ಅವಧಿಗೂ ತಾವೇ ಸಿಎಂ ಆಗಿ ಮುಂದುವರಿದು ಅವಧಿ ಪೂರ್ಣಗೊಳಿಸುತ್ತೇನೆ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಇದು ಕಾಂಗ್ರೆಸ್ ಹೈಕಮ್ಯಾಂಡ್‌ಗೂ ದೊಡ್ಡ ತಲೆನೋವಾಗಿದೆ. ಅಂತಿಮವಾಗಿ ಈ ಕುರ್ಚಿ ಕದನದಲ್ಲಿ ಹೈಕಮಾಂಡ್ ಮಧ್ಯೆ ಪ್ರವೇಶಿಸಿದ್ದು. ಡಿಸಿಎಂ ಡಿಕೆಶಿ ಅವರನ್ನು ತಮ್ಮ ನಿವಾಸಕ್ಕೆ ಕರೆದು ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚಿಸಿದ್ದಾರೆ. ಈ ಸೂಚನೆ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿ ಅವರನ್ನು ನಾಳೆ (ನವಂಬರ್ 29) ಬೆಳಗ್ಗೆ ತಮ್ಮ ಕಾವೇರಿ ನಿವಾಸಕ್ಕೆ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಕರೆದಿದ್ದಾರೆ.

ಇನ್ನು ಈ ಬ್ರೇಕ್ ಫಾಸ್ಟ್​ ಮೀಟಿಂಗ್​​ ಗೂ ಮುನ್ನವೇ ಸಿದ್ದರಾಮಯ್ಯ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ. ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿದ್ದಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ. ಹೈಕಮಾಂಡ್‌ನವರು ನವದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಬ್ರೇಕ್​ ಫಾಸ್ಟ್​​ ಸಭೆಗೂ ಮೊದಲೇ ಡಿಕೆ ಶಿವಕುಮಾರ್​​ಗೆ ಸಂದೇಶ ನೀಡಿದಂತಿದೆ.