ಈಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ
ಮಲ್ಲಿಕಾರ್ಜುನ ಸ್ವಾಮಿ ಉದ್ದೇಶಪೂರ್ವಕವಾಗಿ ನಮ್ಮ ವರದಿಗಾರನೊಂದಿಗೆ ಮಾತಾಡದಿರುವ ಸಾಧ್ಯತೆಯಿದೆ ಅಥವಾ ಅವರು ಬೇರೆ ಯಾರದ್ದೋ ಸೂಚನೆ ಮೇರೆಗೆ ಮಾತಾಡದೆ ಹೋಗಿರಬಹುದು. ವಿಚಾರಣೆಗೆ ಕರೆದಿದ್ದರು, ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿರುವೆ ಅಂತ ಅವರು ಹೇಳಿದ್ದರೂ ಆಗುತಿತ್ತು, ಆದರೆ ಹೇಳಲಿಲ್ಲ!
ಬೆಂಗಳೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ತನಿಖೆ ಮತ್ತು ವಿಚಾರಣೆ ಮುಂದುವರಿದಿದೆ. ಪ್ರಕರಣದಲ್ಲಿ ಮೂರನೇ ಅರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಇಂದು ಈಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು. ನಗರದ ಶಾಂತಿನಗರದಲ್ಲಿರುವ ಈಡಿ ಕಚೇರಿಯಿಂದ ಸ್ವಾಮಿ ಹೊರಬೀಳುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ನಮ್ಮ ಬೆಂಗಳೂರು ವರದಿಗಾರ ಮಲ್ಲಿಕಾರ್ಜುನ ಸ್ವಾಮಿ ಜೊತೆ ಮಾತಾಡುವ ಪ್ರಯತ್ನ ಮಾಡಿದರು. ಆದರೆ ಅವರು ತುಟಿಬಿಚ್ಚದೆ ತಮ್ಮ ಕಾರು ಹತ್ತಿ ಹೊರಟರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮುಡಾ ಹಗರಣ ಬಗೆಯುತ್ತಿದೆ ಇಡಿ: ಸಿಎಂ ಸಿದ್ದರಾಮಯ್ಯ ಖಾಸಗಿ ಆಪ್ತ ಸಹಯಕನಿಗೆ ಗ್ರಿಲ್
Latest Videos