Karnataka Assembly Polls: ವರುಣಾ ಕ್ಷೇತ್ರದಲ್ಲಿ ಮಾವ ಸಿದ್ದರಾಮಯ್ಯ ಪರ ಮತಯಾಚನೆಗಿಳಿದ ಸ್ಮಿತಾ ರಾಕೇಶ್
ಸಿದ್ದರಾಮಯ್ಯ ನಾಮಪತ್ರ ಸಲ್ಲಿಸುವಾಗ ಅವರ ಮೊಮ್ಮಗ ಧವನ್ ರಾಕೇಶ್ ಜೊತೆಗೆ ಬಂದಿದ್ದನ್ನು ಇಲ್ಲಿ ಜ್ಞಾಪಿಸಿಕೊಳ್ಳಬಹುದು.
ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಚುನಾವಣಾ ಪ್ರಚಾರ ರಂಗೇರಿದೆ. ಅಭ್ಯರ್ಥಿಗಳು ಮತ್ತು ಅವರ ನಾಯಕರ ನಂತರ ಕುಟುಂಬ ವರ್ಗದವರು ಕಣಕ್ಕಿಳಿದು ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯನವರ (Siddaramaiah) ಹಿರಿಸೊಸೆ ಸ್ಮಿತಾ ರಾಕೇಶ್ (Smitha Rakesh) ಅವರು ಇಂದು ಕ್ಷೇತ್ರದ ತಾಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಮನೆ ತಿರುಗಿ ತಮ್ಮ ಮಾವನ ಪರ ಮತ ಯಾಚಿಸಿದರು. ಸಿದ್ದರಾಮಯ್ಯ ನಾಮಪತ್ರ ಸಲ್ಲಿಸುವಾಗ ಅವರ ಮೊಮ್ಮಗ ಧವನ್ ರಾಕೇಶ್ (Dhawan Rakesh) (ಸ್ಮಿತಾ ಮತ್ತು ದಿವಂಗತ ರಾಕೇಶ್ ಸಿದ್ದರಾಮಯ್ಯ ಮಗ) ಜೊತೆಗೆ ಬಂದಿದ್ದನ್ನು ಇಲ್ಲಿ ಜ್ಞಾಪಿಸಿಕೊಳ್ಳಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾಅ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos