ನಾಲ್ವಡಿ ಕೃಷ್ಣರಾಜರಿಗಿಂತ ಹೆಚ್ಚು ಅಭಿವೃದ್ಧಿ: ಸಿದ್ದರಾಮಯ್ಯಗೆ ಪುತ್ರ ಬಹುಪರಾಕ್!

Updated on: Jul 25, 2025 | 3:05 PM

'ನಾಡ ಕಟ್ಟಿದ ದೊರೆ' ಎಂದೇ ಇತಿಹಾಸದಲ್ಲಿ ಅಜರಾಮರ ಸ್ಥಾನ ಪಡೆದಿರುವ ನಾಲ್ವಡಿ ಕೃಷ್ಣರಾಜ ಒಡೆಯರ್, ಮೈಸೂರು ಸಂಸ್ಥಾನದ ಸರ್ವತೋಮುಖ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಕೃಷಿ, ಶಿಕ್ಷಣ, ನೀರಾವರಿ, ಸಾಮಾಜಿಕ ವಲಯಗಳಲ್ಲಿ ಅನೇಕ ಸುಧಾರಣೆಗಳನ್ನು ತಂದಿದ್ದಾರೆ. ಇದೀಗ ಅಭಿವೃದ್ಧಿ ವಿಚಾರದಲ್ಲಿ ಯತೀಂದ್ರ ಅವರು ತಮ್ಮ ತಂದೆ ಸಿಎಂ ಸಿದ್ದರಾಮಯ್ಯನವರನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಹೋಲಿಸಿದ್ದಾರೆ.

ಮೈಸೂರು, (ಜುಲೈ 25): ‘ನಾಡ ಕಟ್ಟಿದ ದೊರೆ’ ಎಂದೇ ಇತಿಹಾಸದಲ್ಲಿ ಅಜರಾಮರ ಸ್ಥಾನ ಪಡೆದಿರುವ ನಾಲ್ವಡಿ ಕೃಷ್ಣರಾಜ ಒಡೆಯರ್, ಮೈಸೂರು ಸಂಸ್ಥಾನದ ಸರ್ವತೋಮುಖ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಕೃಷಿ, ಶಿಕ್ಷಣ, ನೀರಾವರಿ, ಸಾಮಾಜಿಕ ವಲಯಗಳಲ್ಲಿ ಅನೇಕ ಸುಧಾರಣೆಗಳನ್ನು ತಂದಿದ್ದಾರೆ. ಇದೀಗ ಅಭಿವೃದ್ಧಿ ವಿಚಾರದಲ್ಲಿ ಯತೀಂದ್ರ ಅವರು ತಮ್ಮ ತಂದೆ ಸಿಎಂ ಸಿದ್ದರಾಮಯ್ಯನವರನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಹೋಲಿಸಿದ್ದಾರೆ.

ಗ್ಯಾರಂಟಿಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎನ್ನುವ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿರುವ ಯತೀಂದ್ರ ಸಿದ್ದರಾಮಯ್ಯ, ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜರಿಗಿಂತ ಹೆಚ್ಚು ಅಥವಾ ಅವರಷ್ಟೇ ಅನುದಾನ ಕೊಟ್ಟು ಅಭಿವೃದ್ಧಿಪಡಿಸಿದ್ದು ಸಿದ್ದರಾಮಯ್ಯ ಮಾತ್ರ. ಅಭಿವೃದ್ಧಿ ಮಾಡಿರುವುದಕ್ಕಾಗಿಯೇ ಸಾಧನಾ ಸಮಾವೇಶ ಮಾಡಿದ್ದು‌. ಸುಮ್ಮನೇ ವಿಪಕ್ಷಗಳು ಟೀಕೆ ಮಾಡುತ್ತವೆ ಎಂದು ಸಿದ್ದರಾಮಯ್ಯನವರನ್ನು ನಾಲ್ವಡಿ ಕೃಷ್ಣರಾಜ ಅವರಿಗೆ ಹೋಲಿಕೆ ಮಾಡಿ ತಿರುಗೇಟು ನೀಡಿದ್ದಾರೆ.