ಜಡ, ಉದಾಸೀನ ಆಧಿಕಾರಿಗಳ ಮೇಲೆ ಕ್ರಮ ಜರುಗಿಸಿ ಆಡಳಿತ ಯಂತ್ರ ಚುರುಕುಗೊಳಿಸುವಂತೆ ಉಡುಪಿ ಜಿಲ್ಲಾಧಿಕಾರಿಗೆ ಸಿದ್ದರಾಮಯ್ಯ ಸೂಚನೆ

|

Updated on: Aug 01, 2023 | 6:37 PM

ಉಡುಪಿ ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ರಸ್ತೆಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಉಡುಪಿ: ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾಧ್ಯಮ ಗೋಷ್ಟಿ ನಡೆಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನಗರದಲ್ಲಿ ಸೈಬರ್ ಕ್ರೈಮ್ (Cyber crime) ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತಾಡಿರುವುದಾಗಿ ಹೇಳಿದರು. ಜಿಲ್ಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ರಸ್ತೆಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ನಂತರ ಅವರು ಇತ್ತೀಚಿಗಷ್ಟೇ ಉಡುಪಿ ಜಿಲ್ಲಾಧಿಕಾರಿಯಾಗಿ ಆಗಮಿಸಿರುವ ವಿದ್ಯಾಕುಮಾರಿ ಕೆ (Vidya Kumari K) ಅವರನ್ನು ಉದ್ದೇಶಿಸಿ, ನೀವು ಟೀಮಿನ ಕ್ಯಾಪ್ಟನ್ ಇದ್ದಂತೆ, ಆಡಳಿತ ಯಂತ್ರ ಚುರುಕುಗೊಳಿಸಲು ಎಲ್ಲ ಕ್ರಮ ತೆಗೆದುಕೊಳ್ಳಿ, ಜಡತ್ವ, ಉದಾಸೀನ, ಕರ್ತವ್ಯದೆಡೆ ನಿರ್ಲಕ್ಷ್ಯ ತೋರುವ ಅಧಿಕಾರಿಗಲ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಗಮನಕ್ಕೆ ತನ್ನಿ, ಅವರು ನನಗೆ ತಿಳಿಸಿದರೆ ನಿರ್ದ್ಯಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು. ಮ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ