AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೆಷಲ್ ಫ್ಲೈಟ್​ನಲ್ಲಿ ಒಟ್ಟಿಗೆ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!

ಸ್ಪೆಷಲ್ ಫ್ಲೈಟ್​ನಲ್ಲಿ ಒಟ್ಟಿಗೆ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!

ಭಾವನಾ ಹೆಗಡೆ
|

Updated on: Jun 01, 2026 | 12:05 PM

Share

ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಲು ಹಂಗಾಮಿ ಸಿಎಂ ಸಿದ್ದರಾಮಯ್ಯ ಮತ್ತು ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಇಬ್ಬರೂ ಒಟ್ಟಿಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಅಧಿಕಾರ ಹಂಚಿಕೆ ಮತ್ತು ಸಂಪುಟ ಪುನರ್‌ರಚನೆ ಕುರಿತು ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಮತ್ತು ಹಿರಿಯ ನಾಯಕ ಹೆಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ಮುಖಂಡರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೊಂದಿಗೆ ದೆಹಲಿಗೆ ಪ್ರಯಾಣಿಸಿದ್ದಾರೆ.

ಬೆಂಗಳೂರು, ಜೂನ್ 01: ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಲು ಹಂಗಾಮಿ ಸಿಎಂ ಸಿದ್ದರಾಮಯ್ಯ ಮತ್ತು ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಇಬ್ಬರೂ ಒಟ್ಟಿಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಅಧಿಕಾರ ಹಂಚಿಕೆ ಮತ್ತು ಸಂಪುಟ ಪುನರ್‌ರಚನೆ ಕುರಿತು ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಮತ್ತು ಹಿರಿಯ ನಾಯಕ ಹೆಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ಮುಖಂಡರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೊಂದಿಗೆ ದೆಹಲಿಗೆ ಪ್ರಯಾಣಿಸಿದ್ದಾರೆ.

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಮತ್ತು ರಾಜಕೀಯ ಸ್ಥಿತ್ಯಂತರಗಳ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ರಣದೀಪ್ ಸುರ್ಜೇವಾಲಾ ಅವರೊಂದಿಗೆ ಚರ್ಚೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ. ಈ ಉನ್ನತ ಮಟ್ಟದ ಭೇಟಿ ರಾಜ್ಯ ರಾಜಕೀಯದಲ್ಲಿ ಮುಂದಿನ ಬೆಳವಣಿಗೆಗಳಿಗೆ ನಿರ್ಣಾಯಕವಾಗಬಹುದು. ಈ ಭೇಟಿಯು ಕರ್ನಾಟಕದಲ್ಲಿ ಸ್ಥಿರ ಸರ್ಕಾರ ರಚನೆಗೆ ಅಡಿಪಾಯ ಹಾಕುವ ಸಾಧ್ಯತೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More