ಅಧಿಕಾರ ಹಂಚಿಕೆ ಒಪ್ಪಂದ ಬಗ್ಗೆ ನಾನು ಹೇಳಿಕೆ ನೀಡಿಲ್ಲ: ಮುನಿಯಪ್ಪ ಯೂಟರ್ನ್?
ಸಚಿವ ಕೆ.ಹೆಚ್. ಮುನಿಯಪ್ಪ ಅವರ ಹೇಳಿಕೆಯಿಂದ ಕರ್ನಾಟಕದ ರಾಜಕೀಯದಲ್ಲಿ ಮತ್ತೊಂದು ಸಂಚಲನ ಉಂಟಾಗಿದೆ. ಮುಖ್ಯಮಂತ್ರಿ ಸ್ಥಾನದ ಅಧಿಕಾರ ಹಂಚಿಕೆ ಕುರಿತು ಅವರ ಹೇಳಿಕೆ ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವಿನ ಒಪ್ಪಂದದ ಬಗ್ಗೆ ಚರ್ಚೆಗೆ ಕಾರಣವಾಗಿದೆ.ನಂತರ ತಮ್ಮ ಹೇಳಿಕೆಯನ್ನು ಅವರು ಹಿಂಪಡೆದಿದ್ದು, ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಬಿನ್ನಾಭಿಪ್ರಾಯ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ಡಿಕೆಶಿ ಅವರು ಪಕ್ಷದ ನಾಯಕರಿಗೆ ಈ ಬಗ್ಗೆ ಮಾತನಾಡದಂತೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಕುರ್ಚಿ ಸಂಬಂಧ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನಡುವಿನ ಅಧಿಕಾರ ಹಂಚಿಕೆ ಒಪ್ಪಂದ ಮತ್ತೆ ಚರ್ಚೆಗೆ ಬಂದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಚಿವ ಕೆ ಹೆಚ್ ಮುನಿಯಪ್ಪ, ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದು ಸರಿಯಾಗಿದೆ ಎಂದು ಹೇಳಿದ್ದರು.
ಇದು, ರಾಜ್ಯ ಕಾಂಗ್ರೆಸ್ ನಾಯಕರು ಮುಜುಗರಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಬಿನ್ನಾಭಿಪ್ರಾಯ ಮತ್ತೆ ಭುಗಿಲೇಳುವ ಲಕ್ಷಣ ಕಾಣುತ್ತಿದ್ದಂತೆ ಎಚ್ಚೆತ್ತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಯಾರು ಕೂಡ ಒಪ್ಪಂದದ ಬಗ್ಗೆ ಮಾತನಾಡಬಾರದು ಎಂದು ಖಡನ್ ಸಂದೇಶ ರವಾನಿಸಿದರು.
ಇದೀಗ, ತಮ್ಮ ಹೇಳಿಕೆಗೆ ಕೆಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. “ನಾನು ಆ ರೀತಿಯ ಹೇಳಿಕೆ ನೀಡಿಲ್ಲ. ಕೋಲಾರದಲ್ಲಿ ನಾನು ಮಾಧ್ಯಮಕ್ಕೆ ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿದ್ದು, ಮುಖ್ಯಮಂತ್ರಿಯವರ ಅಧಿಕಾರ ಅವಧಿಯ ಹಂಚಿಕೆಯ ಕುರಿತ ಹೇಳಿಕೆ ಯಾವ ಹೇಳಿಕೆಯನ್ನು ಸಹ ನೀಡಿರುವುದಿಲ್ಲ ಎಂದು ಸಚಿವ ಮುನಿಯಪ್ಪ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಕೆಹೆಚ್ ಮುನಿಯಪ್ಪ ಅವರು ಯುಟರ್ನ್ ಹೊಡೆದಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ