ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಸ್ವಾಗತಕ್ಕೆ ಸಿದ್ಧತೆ: ಹೇಗಿದೆ ನೋಡಿ ಪೊಲೀಸ್ ಬಂದೋಬಸ್ತ್
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಆಗಮಿಸುತ್ತಿರುವ ಹಿನ್ನೆಲೆ ಹೆಚ್ಎಎಲ್ ವಿಮಾನ ನಿಲ್ದಾಣದ ಬಳಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ. ಆಗಮಿಸುತ್ತಿರುವ ನಾಯಕರು
ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರು ಕರ್ನಾಟಕ ಮುಖ್ಯಮಂತ್ರಿ ಹಾಗೂ ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಖುದ್ದು ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡಿದೆ. ಇದರೊಂದಿಗೆ ಕರ್ನಾಟಕ ಸಿಎಂ ಯಾರು ಎನ್ನುವ ಗೊಂದಲಕ್ಕೆ ತೆರೆ ಬಿದ್ದಿದೆ. ಸದ್ಯ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಆಗಮಿಸುತ್ತಿದ್ದಾರೆ. ಸಿಎಂ ಘೋಷಣೆ ಹಿನ್ನೆಲೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದ ಬಳಿ ಬೆಂಬಲಿಗರಿಂದ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಾಗಾಗಿ ಹೆಚ್ಎಎಲ್ ವಿಮಾನ ನಿಲ್ದಾಣದ ಬಳಿ ಬಿಗಿ ಭದ್ರತೆ ಒದಗಿಸಲಾಗಿದೆ. ಮಾರತ್ತಹಳ್ಳಿ ಎಸಿಪಿ ಕಿಶೋರ್ ಭರಣಿ ನೇತೃತ್ವದಲ್ಲಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.