ಆರೆಸ್ಸೆಸ್ ಮತ್ತು ಖಿಲಾಫತ್ ಚಳುವಳಿ ಬಗ್ಗೆ ಸಿದ್ದರಾಮಯ್ಯನವರಿಗೆ ಕನಿಷ್ಟ ಜ್ಞಾನ ಕೂಡ ಇಲ್ಲ: ಪ್ರತಾಪ್ ಸಿಂಹ, ಸಂಸದ

ಆರೆಸ್ಸೆಸ್ ಮತ್ತು ಖಿಲಾಫತ್ ಚಳುವಳಿ ಬಗ್ಗೆ ಸಿದ್ದರಾಮಯ್ಯನವರಿಗೆ ಕನಿಷ್ಟ ಜ್ಞಾನ ಕೂಡ ಇಲ್ಲ: ಪ್ರತಾಪ್ ಸಿಂಹ, ಸಂಸದ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 13, 2022 | 3:27 PM

ಇವರು ಕೊಡಿಸಿದ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ಕಾಪಾಡಿಕೊಳ್ಳಲು ಹುಟ್ಟಿದ್ದೇ ಆರ್ ಎಸ್ ಎಸ್, ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಿಲಾಫತ್ ಚಳುವಳಿ ಮತ್ತು ಆರ್ ಎಸ್ ಎಸ್ ಬಗ್ಗೆ ಕನಿಷ್ಟ ಜ್ಞಾನ ಕೂಡ ಇಲ್ಲದೆ ಮಾತಾಡುತ್ತಾರೆ ಎಂದು ಲೇವಡಿ ಮಾಡಿದರು.

ಮೈಸೂರು: ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ (Pratap Simha) ಮೈಸೂರಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತಾಡುವಾಗ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಸುಭಾಷ್ ಚಂದ್ರ ಬೋಸ್ ಮೊದಲಾದ ಕ್ರಾಂತಿಕಾರಿಗಳೇ ಹೊರತು ಕಾಂಗ್ರೆಸ್ (Congress) ಅಲ್ಲ ಎಂದು ಹೇಳಿದರು. ಇವರು ಕೊಡಿಸಿದ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ಕಾಪಾಡಿಕೊಳ್ಳಲು ಹುಟ್ಟಿದ್ದೇ ಆರ್ ಎಸ್ ಎಸ್, ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಖಿಲಾಫತ್ ಚಳುವಳಿ ಮತ್ತು ಆರ್ ಎಸ್ ಎಸ್ ಬಗ್ಗೆ ಕನಿಷ್ಟ ಜ್ಞಾನ ಕೂಡ ಇಲ್ಲದೆ ಮಾತಾಡುತ್ತಾರೆ ಎಂದು ಲೇವಡಿ ಮಾಡಿದರು.