ಸಚಿವ ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ

Edited By:

Updated on: Aug 06, 2026 | 6:15 PM

ಸಚಿವ ಭೈರತಿ ಸುರೇಶ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಆರೋಪದ ಮೇಲೆ ಸಿದ್ದರಾಮಯ್ಯ ಅಭಿಮಾನಿ ಜಯಕುಮಾರ್ ಅವರನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರ್.ಟಿ.ನಗರ ಠಾಣೆಯಲ್ಲಿ ಈ ಸಂಬಂಧ ಎಫ್.ಐ.ಆರ್. ದಾಖಲಾಗಿದ್ದು, ಇಬ್ಬರು ಆರೋಪಿಗಳ ಪೈಕಿ ವಿಲ್ಸನ್ ಗಾರ್ಡನ್ ನಿವಾಸಿ ಜಯಕುಮಾರ್‌ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರು, ಆಗಸ್ಟ್​ 06: ಸಚಿವ ಭೈರತಿ ಸುರೇಶ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಆರೋಪದ ಮೇಲೆ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅಭಿಮಾನಿ ಜಯಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಭೈರತಿ ಸುರೇಶ್ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಲಾಗಿದೆ ಎಂಬ ದೂರಿನ ಅನ್ವಯ ಆರ್.ಟಿ.ನಗರ ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್.ಐ.ಆರ್. ದಾಖಲಾಗಿತ್ತು. ಈ ಪ್ರಕರಣದಲ್ಲಿ ವಿಲ್ಸನ್ ಗಾರ್ಡನ್ ನಿವಾಸಿಯಾದ ಜಯಕುಮಾರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ, ಜಯಕುಮಾರ್ ಪೊಲೀಸರ ವಿಚಾರಣೆಗೆ ಒಳಪಡಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More