ಹೇಳದೇ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿದ ಎಐಸಿಸಿ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿ (AICC OBC Advisory Council) ಅಧ್ಯಕ್ಷರಾಗಿ ನೇಮಕ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.ಆದ್ರೆ, ಎಐಸಿಸಿ ಒಬಿಸಿ ಸಲಹಾ ಮಂಡಳಿಗೆ ತಮ್ಮನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಸಿದ್ದರಾಮಯ್ಯನವರಿಗೆ ಗೊತ್ತಿಲ್ಲ ಎನ್ನುವುದು ಅಚ್ಚರಿಕೆ ಕಾರಣವಾಗಿದೆ.
ಬೆಂಗಳೂರು, (ಜುಲೈ 06): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿ (AICC OBC Advisory Council) ಅಧ್ಯಕ್ಷರಾಗಿ ನೇಮಕ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.ಆದ್ರೆ, ಎಐಸಿಸಿ ಒಬಿಸಿ ಸಲಹಾ ಮಂಡಳಿಗೆ ತಮ್ಮನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಸಿದ್ದರಾಮಯ್ಯನವರಿಗೆ ಗೊತ್ತಿಲ್ಲ ಎನ್ನುವುದು ಅಚ್ಚರಿಕೆ ಕಾರಣವಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ. ನೇಮಕದ ಬಗ್ಗೆ ನನಗೆ ಗೊತ್ತಿಲ್ಲ, ಎಐಸಿಸಿಯವರ ಜೊತೆ ಮಾತಾಡುತ್ತೇನೆ. ಜುಲೈ 15ರಂದು ಕರ್ನಾಟಕದಲ್ಲಿ ಒಂದು ಸಭೆ ಮಾಡಿ ಎಂದು ನನಗೆ ಹೇಳಿದ್ದರು. ಸಂಚಾಲಕರನ್ನಾಗಿ ಮಾಡಿದ್ದಾರೋ, ಚೇರ್ಮನ್ ಮಾಡಿದ್ದಾರೋ ಗೊತ್ತಿಲ್ಲ. ಹೈಕಮಾಂಡ್ ಜೊತೆ ಮಾತನಾಡುತ್ತೇನೆ. ನಾನು ಕೇಳಿಲ್ಲ, ಅವರು ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡುತ್ತೇನೆ. ರಾಷ್ಟ್ರ ರಾಜಕಾರಣ ಅಲ್ಲ, ಏನು ಅಂತಾ ಘೋಷಣೆ ಮಾಡಿದ್ದಾರೆ ಗೊತ್ತಿಲ್ಲ ಎಂದರು.