‘ಕೊಟ್ಟ ಮಾತಿನ’ ಬಗ್ಗೆ ಪ್ರಶ್ನೆ ಕೇಳ್ತಿದ್ದಂತೆ ಸಿಟ್ಟಾದ ಸಿದ್ದರಾಮಯ್ಯ: ಜೋರಾಗಿ ನಕ್ಕ ಡಿಕೆ ಶಿವಕುಮಾರ್
ಕೊಟ್ಟ ಮಾತು ಮತ್ತು 2.5 ವರ್ಷದ ಸಿಎಂ ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಹೇಳಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ವೇಳೆ ನಕ್ಕರು. ತಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಬೆಂಗಳೂರು, ನವೆಂಬರ್ 29: ‘ಕೊಟ್ಟ ಮಾತು’ ಹಾಗೂ ಎರಡೂವರೆ ವರ್ಷದ ಅಧಿಕಾರ ಹಂಚಿಕೆ ಒಪ್ಪಂದದ ಕುರಿತ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮದವರ ಪ್ರಶ್ನೆಗೆ ಸಿಟ್ಟಿನಿಂದಲೇ ಉತ್ತರಿಸಿದ ಅವರು, ಏನು ಕೊಟ್ಟ ಮಾತು? ಹೈಕಮಾಂಡ್ ಹೇಳಿದ್ದನ್ನು ಮಾಡುತ್ತೇವೆ ಎಂದು ಹೇಳಿದ ಮೇಲೆ ಕೊಟ್ಟ ಮಾತಿನಂತೆ ಎಂಬ ಪ್ರಶ್ನೆ ಎಲ್ಲಿ ಬಂರು ಎಂದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೋರಾಗಿ ನಗಾಡಿರುವುದು ಗಮನ ಸೆಳೆಯಿತು. ‘‘ನಾವು ಒಟ್ಟಾಗಿ ಹೋಗುತ್ತೇವೆ. ನನಗೂ ಮತ್ತು ಡಿ.ಕೆ. ಶಿವಕುಮಾರ್ ಅವರಿಗೂ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ’’ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
Latest Videos
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ

