Yuvakranti Convention: ಸಿದ್ದರಾಮಯ್ಯ ಭಾಷಣ ಮಾಡಲು ಬಂದಾಗ ಕಿವಿಗಡಚಿಕ್ಕುವಂತೆ ಕರತಾಡನ, ರಾಹುಲ್ ಖುಷ್ ಹುವಾ!?

ಅರುಣ್​ ಕುಮಾರ್​ ಬೆಳ್ಳಿ

Updated on: Mar 20, 2023 | 6:04 PM

ವೇದಿಕೆಯ ಮೇಲೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಡಿಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ ಮತ್ತು ಇತರ ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯನವರ ಜನಪ್ರಿಯತೆ ಬಗ್ಗೆ ಸ್ಪಷ್ಟ ಸಂದೇಶ ಸಿಕ್ಕಿರಬಹುದು.

ಬೆಳಗಾವಿ: ಬೆಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದ್ದು ಸತ್ಯ ಮಾರಾಯ್ರೇ, ಸಿದ್ದರಾಮಯ್ಯ (Siddaramaiah) ನಿಜಕ್ಕೂ ಒಬ್ಬ ಜನನಾಯಕ! ಬೆಳಗಾವಿಯಲ್ಲಿ ಇಂದು ಕಾಂಗ್ರೆಸ್ ಪಕ್ಷ ಆಯೋಜಿಸಿದ ಯುವಕ್ರಾಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಯಿಂದ ಆಗಮಿಸಿದ ರಾಹುಲ್ ಗಾಂಧಿಯವರಿಗೆ (Rahul Gandhi) ಸಿಗದಷ್ಟು ಕರತಾಡನ, ಶಿಳ್ಳೆ ಸಿದ್ದರಾಮಯ್ಯನವರಿಗೆ ಸಿಕ್ಕಿತು. ವೇದಿಕೆಯ ಮೇಲೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಡಿಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ ಮತ್ತು ಇತರ ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯನವರ ಜನಪ್ರಿಯತೆ ಬಗ್ಗೆ ಸ್ಪಷ್ಟ ಸಂದೇಶ ಸಿಕ್ಕಿರಬಹುದು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಹಾಜರಿದ್ದ ಸಹಸ್ರಾರು ಜನರ ಕಿವಿಗಡಚಿಕ್ಕುವಂಥ ಸ್ವಾಗತ ಸಿದ್ದರಾಮಯ್ಯನವರಿಗೆ ಸಿಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.