ಚುನಾವಣಾ ಪ್ರಚಾರಕ್ಕೆ ಮಹಾರಾಷ್ಟ್ರ ತೆರಳಿದ ಸಿಎಂ ಸಿದ್ದರಾಮಯ್ಯಗೆ ಅದ್ದೂರಿ ಸ್ವಾಗತ

ಚುನಾವಣಾ ಪ್ರಚಾರಕ್ಕೆ ಮಹಾರಾಷ್ಟ್ರ ತೆರಳಿದ ಸಿಎಂ ಸಿದ್ದರಾಮಯ್ಯಗೆ ಅದ್ದೂರಿ ಸ್ವಾಗತ

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 15, 2024 | 7:52 PM

ಒಂದು ಅಂದಾಜಿನ ಪ್ರಕಾರ ಮಹಾರಾಷ್ಟ್ರದಲ್ಲಿ ಕುರುಬ ಸಮುದಾಯದವರ ಸಂಖ್ಯೆ ಸುಮಾರು ಒಂದು ಕೋಟಿಗೂ ಜಾಸ್ತಿ. ಸಾಂಗ್ಲಿ, ಕೊಲ್ಹಾಪುರ ಮತ್ತು ಸೋಲಾಪುರ ಜಿಲ್ಲೆಗಳಲ್ಲಿ ಅವರು ಹೇರಳವಾಗಿದ್ದಾರೆ. ಕುರುಬ ಸಮಾಜವನ್ನು ಪ್ರತಿನಿಧಿಸುವ ಸಿದ್ದರಾಮಯ್ಯ ಈ ಮೂರು ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ದಿನಗಳ ಪ್ರವಾಸಕ್ಕಾಗಿ ನೆರೆರಾಜ್ಯ ಮಹಾರಾಷ್ಟ್ರ ಹೋಗಿದ್ದಾರೆ. ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗಾಗಿ ಪ್ರಚಾರ ಕಾರ್ಯ ಭರದಿಂದ ನಡೆಯುತ್ತಿದೆ. ಸಿದ್ದರಾಮಯ್ಯಗೆ ಸ್ಥಳೀಯ ನಾಯಕರು ಮತ್ತು ಅಲ್ಲಿ ವಾಸವಾಗಿರುವ ಕನ್ನಡಿಗರು ಮತ್ತು ಮರಾಥಿ ಮಾತಾಡುವ ಜನ ಭವ್ಯ ಸ್ವಾಗತ ನೀಡಿದರು. ಸಿದ್ದರಾಮಯ್ಯರೊಂದಿಗೆ ಸಚಿವ ಎಂಬಿ ಪಾಟೀಲ್ ಅವರನ್ನು ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನಮ್ಮ ಸರ್ಕಾರ ಕ್ರೀಡಾಪಟುಗಳಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುತ್ತಿದೆ: ಸಿದ್ದರಾಮಯ್ಯ