AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ಡಿಕೆಶಿ, ಪರಮೇಶ್ವರ್​​ರಿಂದ ವಿಶೇಷ ಸ್ವಾಗತ

ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ಡಿಕೆಶಿ, ಪರಮೇಶ್ವರ್​​ರಿಂದ ವಿಶೇಷ ಸ್ವಾಗತ

ಪ್ರಸನ್ನ ಗಾಂವ್ಕರ್​
| Edited By: |

Updated on: Sep 10, 2026 | 1:29 PM

Share

ಕರ್ನಾಟಕ ಸರ್ಕಾರದ 100 ದಿನಗಳ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಆಗಮಿಸಿದರು. ಕೋಟ್ಯಾಂತರ ಕನ್ನಡಿಗರ ವಿಶ್ವಾಸಕ್ಕೆ ಪೂರಕವಾಗಿ ಜನಕಲ್ಯಾಣ, ಆರ್ಥಿಕ ಪ್ರಗತಿ, ಸಾಮಾಜಿಕ ನ್ಯಾಯ ಮತ್ತು ದೂರದೃಷ್ಟಿಯ ಅಭಿವೃದ್ಧಿಯ ಗುರಿಗಳನ್ನು ಈ ನೂರು ದಿನಗಳಲ್ಲಿ ಸರ್ಕಾರ ಸಾಧಿಸಿದೆ.

ಬೆಂಗಳೂರು, ಸೆಪ್ಟೆಂಬರ್​​ 10: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ವಿಶೇಷ ಕಾರ್ಯಕ್ರಮ ನಡೆದಿದೆ. ಸಿಎಂ ಡಿಕೆಶಿ, ಡಿಸಿಎಂ ಪರಮೇಶ್ವರ್​​, ಸಚಿವರು ಸೇರಿದಂತೆ ಅನೇಕರು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ. ಸರ್ಕಾರದ ನೂರು ದಿನಗಳ ಸಂಭ್ರಮ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ವಿಶೇಷ ಆಹ್ವಾನ ನೀಡಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ ಅವರನ್ನು ಸಿಎಂ ಡಿಕೆಶಿ ಮತ್ತು ಡಿಸಿಎಂ ಪರಮೇಶ್ವರ್​​ ಅವರೇ ಅಕ್ಕಪಕ್ಕ ಸಾಗಿ ವೇದಿಕೆಗೆ ಕರೆದೊಯ್ದಿದ್ದು ಗಮನಸೆಳೆಯಿತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us