Money in place of rice: ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಹಣ ನೀಡಲು ನಿರ್ಧರಿಸಿದ ಸರ್ಕಾರ, ಜುಲೈನಿಂದಲೇ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ!

Money in place of rice: ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಹಣ ನೀಡಲು ನಿರ್ಧರಿಸಿದ ಸರ್ಕಾರ, ಜುಲೈನಿಂದಲೇ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ!

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 28, 2023 | 4:39 PM

ಜುಲೈ ತಿಂಗಳಿನಿಂದಲೇ ಬಿಪಿಎಲ್ ಕುಟುಂಬದ ಯಜಮಾನನ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಿದ್ದರಾಮಯ್ಯ, ಅನ್ನಭಾಗ್ಯ ಯೋಜನೆ ಅಡಿ ಬಿಪಿಎಲ್ ಕಾರ್ಡುದಾರರಿಗೆ (BPL card holders) ನೀಡಲು ಅಕ್ಕಿ ಸಿಗುತ್ತಿಲ್ಲವಾದ್ದರಿಂದ ಅದರ ಬದಲು ಹಣ ನೀಡಲು ಸರ್ಕಾರ ನಿರ್ಧರಿಸಿದೆಯೆಂದು ಹೇಳಿದರು. ಪಡಿತರ ಚೀಟಿ (ration card) ಹೊಂದಿರುವ ಕುಟುಂಬದ ಪ್ರತಿ ಸದಸ್ಯನಿಗೆ ತಲಾ ರೂ. 170 ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಕುಟುಂಬವೊಂದರಲ್ಲಿ 4 ಸದಸ್ಯರಿದ್ದರೆ ರೂ. 680, ಐವರಿದ್ದರೆ ರೂ. 850 ನೀಡಲಾಗುವುದು ಎಂದು ಹೇಳಿದ ಸಿದ್ದರಾಮಯ್ಯ ಜುಲೈ 1ರಿಂದ ಅಕ್ಕಿ ನೀಡುವ ಭರವಸೆ ನೀಡಿದ್ದೆವು ಹಾಗಾಗಿ ಆ ತಿಂಗಳಿನಿಂದಲೇ ಬಿಪಿಎಲ್ ಕುಟುಂಬದ ಯಜಮಾನನ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಾಗುವುದು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ