ಅಭಿವೃದ್ಧಿ ಶೂನ್ಯ ಒಂದು ವರ್ಷವನ್ನು ಸಿದ್ದರಾಮಯ್ಯ ಸರ್ಕಾರ ಪೂರೈಸಿದೆ: ಆರ್ ಅಶೋಕ, ವಿರೋಧ ಪಕ್ಷದ ನಾಯಕ

ಅರುಣ್​ ಕುಮಾರ್​ ಬೆಳ್ಳಿ

Updated on: May 20, 2024 | 2:52 PM

ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರದಲ್ಲಿ ಸಿದ್ದರಾಮಯ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಅಶೋಕ ಹೇಳಿದರು. ಒಂದು ರಸ್ತೆ ದುರಸ್ತಿ ಕಾಣುತ್ತಿಲ್ಲ, ಯಾವುದೇ ನೀರಾವರಿ ಯೋಜನೆ ಬಗ್ಗೆ ಸರ್ಕಾರ ಯೋಚನೆ ಮಾಡಿಲ್ಲ, ಮಳೆಗಾಲದಲ್ಲಿ ತೊಂದರೆಗೊಳಗಾಗುವ ಪ್ರದೇಶಗಳಲ್ಲಿ ಸೇತುವೆಗಳನ್ನು ನಿರ್ಮಿಸುವ ಕೆಲಸ ಕೈಗೆತ್ತಿಕೊಂಡಿಲ್ಲ ಎಂದು ಅಶೋಕ ಹೇಳಿದರು.

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ (Congress government) ಅಭಿವೃದ್ಧಿ ಶೂನ್ಯ ಒಂದು ವರ್ಷವನ್ನು ಪೂರೈಸಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashoka) ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಮಾತಾಡಿದ ಅವರು, ಹುಟ್ಟಿದ ಮಗು ಒಂದು ವರ್ಷದಲ್ಲಿ ಅಂಬೆಗಾಲಿಡಲು ಆರಂಭಿಸುತ್ತದೆ, ಆದರೆ ಕಾಂಗ್ರೆಸ್ ಸರ್ಕಾರ ಅಂಬೆಗಾಲಿಡುವ ದಿನಗಳು ಇನ್ನೂ ದೂರ, ತಮ್ಮ ಗ್ಯಾರಂಟಿ ಯೋಜನೆಗಳನ್ನು (guarantee schemes) ಜಾರಿಗೊಳಿಸುವ ಭರದಲ್ಲಿ ಸಿದ್ದರಾಮಯ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಅಶೋಕ ಹೇಳಿದರು. ಒಂದು ರಸ್ತೆ ದುರಸ್ತಿ ಕಾಣುತ್ತಿಲ್ಲ, ಯಾವುದೇ ನೀರಾವರಿ ಯೋಜನೆ ಬಗ್ಗೆ ಸರ್ಕಾರ ಯೋಚನೆ ಮಾಡಿಲ್ಲ, ಮಳೆಗಾಲದಲ್ಲಿ ತೊಂದರೆಗೊಳಗಾಗುವ ಪ್ರದೇಶಗಳಲ್ಲಿ ಸೇತುವೆಗಳನ್ನು ನಿರ್ಮಿಸುವ ಕೆಲಸ ಕೈಗೆತ್ತಿಕೊಂಡಿಲ್ಲ ಎಂದು ಅಶೋಕ ಹೇಳಿದರು.

ರಾಜ್ಯದ ನಾನಾ ಭಾಗಗಳಲ್ಲಿ ಶಿಥಿಲಗೊಂಡು ಬೀಳುವ ಸ್ಥಿತಿಯಲ್ಲಿರುವ ಶಾಲಾ ಕಟ್ಟಡಗಳಿಗೆ ತುರ್ತು ಕಾಯಕಲ್ಪದ ಅವಶ್ಯಕತೆಯಿದೆ ಅದರೆ, ಈ ವರ್ಷ ಯಾವುದೇ ಶಾಲೆಯ ದುರಸ್ತಿ ಕಾರ್ಯ ನಡೆಯಲ್ಲ ಅಂತ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಹೇಳಿದ್ದಾರಂತೆ ಎಂದು ಅಶೋಕ ಹೇಳಿದರು. ರಸ್ತೆ, ಕುಡಿಯುವ ನೀರಿನ ಸೌಲಭ್ಯಗಳ ಬಗ್ಗೆ ಕೇಳಿದರೆ, ಸರ್ಕಾರದ ಮಂತ್ರಿಗಳು ಮತ್ತು ಶಾಸಕರು, ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೀವಲ್ಲ, ಅದರಲ್ಲೇ ಎಲ್ಲ ಸರಿಮಾಡಿಕೊಳ್ಳಬೇಕೆಂದು ಧಿಮಾಕು ಪ್ರದರ್ಶಿಸುತ್ತಾರಂತೆ ಎಂದು ಅಶೋಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬರ ಪರಿಹಾರದ ಹಣ ಲೂಟಿ ಹೊಡೆಯಲು ಬಿಡಲ್ಲ: ಕಾವಲು ಕಾಯ್ತೇವೆ ಎಂದ ಆರ್ ಅಶೋಕ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.