ಘೋಷಿತ ಗ್ಯಾರಂಟಿಗಳೊಂದಿಗೆ ಸಿದ್ದರಾಮಯ್ಯ ಸರ್ಕಾರ ಅಘೋಷಿತ ಗ್ಯಾರಂಟಿಗಳನ್ನೂ ಜಾರಿಗೊಳಿಸಿದೆ: ಸಿಟಿ ರವಿ
ವಿದ್ಯುತ್ ಕಡಿತ ಇಲ್ಲ ಎಂದಿದ್ದ ಕಾಂಗ್ರೆಸ್ ಸರ್ಕಾರ ಲೋಡ್ ಶೆಡ್ಡಿಂಗ್ ಮಾಡುತ್ತಿದೆ, ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ, ರಾಜ್ಯದೆಲ್ಲೆಡೆ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ ಮತ್ತು ಈ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕೆ ಜಾತಿಗಳ ನಡುವಿನ ಸಂಘರ್ಷ ಹೆಚ್ಚಾಗಿದೆ ಎಂದು ಸಿಟಿ ರವಿ ಹೇಳಿದರು.
ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿ ಮಾತಾಡಿದ ಬಿಜೆಪಿ ನಾಯಕ ಸಿಟಿ ರವಿ (CT Ravi), ಇಂದು 5ನೇ ಗ್ಯಾರಂಟಿ (5th guarantee) ಜಾರಿಗೊಳಿಸಿರುವ ಸಿದ್ದರಾಮಯ್ಯ ಸರ್ಕಾರ (Siddaramaiah government) ನುಡಿದಂತೆ ನಡೆದಿಲ್ಲ ಅಂತ ಹೇಳಿದರು. ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರು ಎಲ್ಲ ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುವ ಗ್ಯಾರಂಟಿ ನೀಡಿದ್ದರು. ನುಡಿದಂತೆ ನಡೆದಿದ್ದೇವೆ ಅಂತ ಸರ್ಕಾರ ಸುಳ್ಳು ಹೇಳುತ್ತಿದೆ. ಕೇವಲ 2022-23 ಸಾಲಿನ ಪದವೀಧರರಿಗೆ ಮಾತ್ರ ಯುವನಿಧಿ ಯೋಜನೆಯಡಿ ಲಾಭಾರ್ಥಿಗಳೆಂದು ಪರಿಗಣಿಸಲಾಗುತ್ತಿದೆ ಎಂದು ರವಿ ಹೇಳಿದರು. ಈ ಗ್ಯಾರಂಟಿಗಳಲ್ಲದೆ ಕೆಲ ಅಘೋಷಿತ ಗ್ಯಾರಂಟಿಗಳನ್ನು ಸಿದ್ದರಾಮಯ್ಯ ಸರ್ಕಾರ ಜಾರಿಗೊಳಿಸಿದೆ ಎಂದ ರವಿ ವಿದ್ಯುತ್ ದರ ಹೆಚ್ಚಿಸಲಾಗಿದೆ, ಅಬ್ಕಾರಿ ಮತ್ತು ಸ್ಟ್ಯಾಂಪ್ ಡ್ಯೂಟಿ ಹೆಚ್ಚಿಸಲಾಗಿದೆ, ಮೋಟಾರು ವಾಹನಗಳ ನೋಂದಣಿ ಸರ್ಕಾರ ಹೆಚ್ಚಿಸಿದೆ, ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸೆಸ್ ಹೆಚ್ಚಿಸಿದೆ ಎಂದು ರವಿ ಹೇಳಿದರು. ವಿದ್ಯುತ್ ಕಡಿತ ಇಲ್ಲ ಎಂದಿದ್ದ ಕಾಂಗ್ರೆಸ್ ಸರ್ಕಾರ ಲೋಡ್ ಶೆಡ್ಡಿಂಗ್ ಮಾಡುತ್ತಿದೆ, ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ, ರಾಜ್ಯದೆಲ್ಲೆಡೆ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ ಮತ್ತು ಈ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕೆ ಜಾತಿಗಳ ನಡುವಿನ ಸಂಘರ್ಷ ಹೆಚ್ಚಾಗಿದೆ ಎಂದು ಸಿಟಿ ರವಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ