ಅನುದಾನ ಬಿಡುಗಡೆ ಮಾಡಿ ಸಿದ್ದರಾಮಯ್ಯ ಸರ್ಕಾರ ಬಿಜೆಪಿ ಶಾಸಕರಿಗೆ ಉಪಕಾರವೇನೂ ಮಾಡಿಲ್ಲ: ವಿಜಯೇಂದ್ರ
ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಲ್ಲಿದೆ, ಯಾರು ಬೇಕಾದರೂ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬಹುದು, ಅದರೆ ಜವಾಬ್ದಾರಿ ವಹಿಸಿಕೊಂಡ ಬಳಿಕ ತಾನು ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಿದ್ದೇನೆ, ಒಂದಿಬ್ಬರನ್ನು ಬಿಟ್ರೆ ಹಿರಿಯ ನಾಯಕರ ಸಮರ್ಥನೆ ತನಗಿದೆ, ಹಾಗಾಗಿ ವರಿಷ್ಠರು ತನ್ನನ್ನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸುವ ಬಗ್ಗೆ ವಿಶ್ವಾಸವಿದೆ ಎಂದು ವಿಜಯೇಂದ್ರ ಹೇಳಿದರು.
ಬೆಂಗಳೂರು: ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಸಿದ್ದರಾಮಯ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿ ದೊಡ್ಡ ಉಪಕಾರ ಮಾಡಿಲ್ಲ, ಎಲ್ಲ ಕ್ಷೇತ್ರಗಳ ಅಬಿವೃದ್ಧಿ ಕಾರ್ಯಗಳಿಗೆ ನ್ಯಾಯವಾಗಿ ದಕ್ಕಬೇಕಿರುವುದನ್ನು ಬಿಡುಗಡೆ ಮಾಡುತ್ತಿದ್ದಾರೆ ಎಂದು ಬಿವೈ ವಿಜಯೇಂದ್ರ ಹೇಳಿದರು. ಅದರೆ ಸೆಲಿಬ್ರೇಟ್ ಮಾಡಬೇಕಿರುವುದು ಅದಲ್ಲ, ಮೈಸೂರಿನ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮುಡಾ ಹಗರಣವನ್ನು ಬಯಲಿಗೆಳೆದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕಟಕಟೆಯಲ್ಲಿ ನಿಲ್ಲಿಸಿದ್ದಾರೆ, ಬಿಜೆಪಿ ಮತ್ತು ಜೆಡಿಎಸ್ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಿವೆ, ಸಿದ್ದರಾಮಯ್ಯ ರಾಜೀನಾಮೆ ನೀಡಿ ಹುದ್ದೆಯನ್ನು ತ್ಯಜಿಸುವ ಮೊದಲು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ವಿಜಯೇಂದ್ರ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸಿಎಂ ಕುರ್ಚಿ ಅಲ್ಲಾಡುತ್ತಿರುವ ಸಮಯದಲ್ಲಿ ಸಿದ್ದರಾಮಯ್ಯ ಜಾತಿಗಣತಿ ವರದಿ ಮುನ್ನೆಲೆಗೆ ತಂದಿದ್ದಾರೆ: ವಿಜಯೇಂದ್ರ
Latest Videos