ಸಂಡೂರು ವಿಧಾನಸಭಾ ಉಪ ಚುನಾವಣೆಗೆ ಮೊದಲು ಸಿದ್ದರಾಮಯ್ಯ ಸರ್ಕಾರದ ಸಾಧನಾ ಸಮಾವೇಶ!
ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಇನ್ನೂ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಿಲ್ಲ. ಸಂಡೂರಿನ ಜನ ತುಕಾರಾಮ್ ಅವರ ಪತ್ನಿ ಇಲ್ಲವೇ ಮಗನಿಗೆ ಟಿಕೆಟ್ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಅದೇನೇ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ನೀಡುವ ಫೀಡ್ಬ್ಯಾಕ್ ನಿರ್ಣಾಯಕವಾಗಲಿದೆ.
ಬಳ್ಳಾರಿ: ಜಿಲ್ಲೆಯ ಸಂಡೂರಿನಲ್ಲಿ ಇನ್ನೇನು ಕೆಲವೇ ನಿಮಿಷಗಳಲ್ಲಿ ಪ್ರಾರಂಭವಾಗಲಿರುವ ರಾಜ್ಯ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿಮ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ನಮ್ಮ ವರದಿಗಾರ ಹೇಳುವಂತೆ ಮುಂಬರುವ ಸಂಡೂರು ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಸಿದ್ದರಾಮಯ್ಯ ಈ ವೇದಿಕೆಯನ್ನು ಲಾಂಚ್ ಪ್ಯಾಡ್ ಆಗಿ ಬಳಸಲಿದ್ದಾರೆ. ಇಲ್ಲಿನ ಶಾಸಕ ಈ ತುಕಾರಾಮ್ ಸಂಸತ್ತಿಗೆ ಆಯ್ಕೆಯಾಗಿರುವುದರಿಂದ ಉಪ ಚುನಾವಣೆ ನಡೆಯೋದು ಅನಿವಾರ್ಯವಾಗಿಬಿಟ್ಟಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಜನಾರ್ದನ್ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಮುಕ್ತ ಅವಕಾಶ: ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಗೆ ಆನೆ ಬಲ
Latest Videos