ಸಂಡೂರು ವಿಧಾನಸಭಾ ಉಪ ಚುನಾವಣೆಗೆ ಮೊದಲು ಸಿದ್ದರಾಮಯ್ಯ ಸರ್ಕಾರದ ಸಾಧನಾ ಸಮಾವೇಶ!

ಅರುಣ್​ ಕುಮಾರ್​ ಬೆಳ್ಳಿ

Updated on: Oct 14, 2024 | 11:56 AM

ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಇನ್ನೂ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಿಲ್ಲ. ಸಂಡೂರಿನ ಜನ ತುಕಾರಾಮ್ ಅವರ ಪತ್ನಿ ಇಲ್ಲವೇ ಮಗನಿಗೆ ಟಿಕೆಟ್ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಅದೇನೇ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ನೀಡುವ ಫೀಡ್​ಬ್ಯಾಕ್ ನಿರ್ಣಾಯಕವಾಗಲಿದೆ.

ಬಳ್ಳಾರಿ: ಜಿಲ್ಲೆಯ ಸಂಡೂರಿನಲ್ಲಿ ಇನ್ನೇನು ಕೆಲವೇ ನಿಮಿಷಗಳಲ್ಲಿ ಪ್ರಾರಂಭವಾಗಲಿರುವ ರಾಜ್ಯ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿಮ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ನಮ್ಮ ವರದಿಗಾರ ಹೇಳುವಂತೆ ಮುಂಬರುವ ಸಂಡೂರು ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಸಿದ್ದರಾಮಯ್ಯ ಈ ವೇದಿಕೆಯನ್ನು ಲಾಂಚ್ ಪ್ಯಾಡ್ ಆಗಿ ಬಳಸಲಿದ್ದಾರೆ. ಇಲ್ಲಿನ ಶಾಸಕ ಈ ತುಕಾರಾಮ್ ಸಂಸತ್ತಿಗೆ ಆಯ್ಕೆಯಾಗಿರುವುದರಿಂದ ಉಪ ಚುನಾವಣೆ ನಡೆಯೋದು ಅನಿವಾರ್ಯವಾಗಿಬಿಟ್ಟಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಜನಾರ್ದನ್ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಮುಕ್ತ ಅವಕಾಶ: ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಗೆ ಆನೆ ಬಲ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.