ರಾಜ್ಯದಲ್ಲಿರೋದು ದೇಶದ್ರೋಹಿಗಳ ರಕ್ಷಣೆಗೆ ನಿಂತಿರುವ ಅಭಿವೃದ್ಧಿಶೂನ್ಯ ಸರ್ಕಾರ: ಬಿವೈ ವಿಜಯೇಂದ್ರ
ರಾಜ್ಯದ ಜನತೆಯ ಪಾಲಿಗೆ ಇದ್ದೂ ಸತ್ತಂತಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸೋಮವಾರ ಬೆಂಗಳೂರಲ್ಲಿ ಪ್ರತಿಭಟನೆ ನಡೆಸಲಾಗಿದೆ, ಭ್ರಷ್ಟ ಮತ್ತು ಹಿಂದೂ ವಿರೋಧಿ ಸರ್ಕಾರವನ್ನು ವಜಾ ಮಾಡಬೇಕೆಂದು ಮುಂದಿನ ದಿನಗಳಲ್ಲಿ ಮಾನ್ಯ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಿದ್ದೇವೆ ಎಂದು ವಿಜಯೇಂದ್ರ ಹೇಳಿದರು.
ಮಂಗಳೂರು: ನಗರದಲ್ಲಿಂದು ವಿರೋಧ ಪಕ್ಷದ ನಾಯಕ ಆರ್ ಅಶೋಕರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಅಭಿವೃದ್ಧಿಶೂನ್ಯ ಸರ್ಕಾರ ಆಡಳಿತ ನಡೆಸುತ್ತಿದೆ ಮತ್ತು 2022 ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರ ಪ್ರಕರಣ ವಾಪಸ್ಸು ಪಡೆಯುವ ಮೂಲಕ ದೇಶದ್ರೋಹಿಗಳ ರಕ್ಷಣೆಗೆ ನಿಂತಿದೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ಗೆ ಅನುಮತಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿವೈ ವಿಜಯೇಂದ್ರ ಆಗ್ರಹ
Published on: Oct 15, 2024 01:16 PM
Latest Videos