Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಪಿಎಲ್ ಕಾರ್ಡುಗಳಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸರ್ಕಾರ ಗೊಂದಲದಲ್ಲಿದೆ: ಕುಮಾರಸ್ವಾಮಿ

ಬಿಪಿಎಲ್ ಕಾರ್ಡುಗಳಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸರ್ಕಾರ ಗೊಂದಲದಲ್ಲಿದೆ: ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 21, 2024 | 1:16 PM

ಎಕ್ಸಿಟ್ ಪೋಲ್​ಗಳ ಸಮೀಕ್ಷೆ ಹಾಗಿರಲಿ, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯೇ ಗೆಲ್ಲೋದು ಎಂದು ಕುಮಾರಸ್ವಾಮಿ ಹೇಳಿದರು. ಹದಿನೈದು ದಿನಗಳ ಕಾಲ ತಾನು ಕ್ಷೇತ್ರದಲ್ಲಿ ಪ್ರಚಾರ ಮಾಡಿರುವುದರಿಂದ ಫಲಿತಾಂಶ ಏನಾಗಲಿದೆ ಅಂತ ಖಚಿತವಾಗಿ ಹೇಳಬಲ್ಲೆ ಎಂದು ಅವರು ಹೇಳಿದರು.

ಬೆಂಗಳೂರು: ಬಿಪಿಎಲ್ ಕಾರ್ಡುಗಳ ಪರಿಷ್ಕರಣೆ ಸಂಬಂಧಿಸಿದಂತೆ ಸರ್ಕಾರದಲ್ಲಿ ಸ್ಪಷ್ಟತೆ ಇಲ್ಲ, ಮುಖ್ಯಮಂತ್ರಿಯವರು ಒಂದು ಹೇಳಿಕೆ ನೀಡುತ್ತಾರೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮತ್ತೊಂದು ಹೇಳಿಕೆ ನೀಡುತ್ತಾರೆ, ಇವತ್ತು ಬಂದ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ನೀಡಿರುವ ಮಾನದಂಡಗಳನ್ನು ಪಾಲಿಸುತ್ತಿರುವುದಾಗಿ ರಾಜ್ಯ ಸರ್ಕಾರ ಹೇಳಿದೆ, ಒಂದು ವಾರದಿಂದ ರಾಜ್ಯ ಸರ್ಕಾರ ಏನು ಮಾಡುತಿತ್ತು ಎಂಬ ಪ್ರಶ್ನೆ ಉದ್ಭವಿಸುತ್ತದೆ, ಈ ಸರ್ಕಾರದ ಸಚಿವರು ಮೊದಲು ತಮಗಿರುವ ಗೊಂದಲಗಳನ್ನು ನಿವಾರಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಯಾರು ಕೊಚ್ಚೆ, ಕಚಡಾ ಎಂದು ಚರ್ಚೆ ಮಾಡೋಣ; ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಪಂಥಾಹ್ವಾನ