ಅಧಿಕಾರಕ್ಕೆ ಬಂದಾಗಿನಿಂದ ಸಿದ್ದರಾಮಯ್ಯ ಸರ್ಕಾರ ಹಗರಣ ಮತ್ತು ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್, ಶಾಸಕ
ಸರ್ಕಾರದ ಹಗರಣಗಳ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ಶಾಸಕರು ಪ್ರತಿಭಟನೆಯ ಭಾಗವಾಗಿ ಮುಖ್ಯಮಂತ್ರಿಯವರ ನಿವಾಸಕ್ಕೆ ಮುತ್ತಿಗೆ ಹಾಕುಲಾಗುವುದೆಂದು ಶಾಸಕ ಸುನೀಲ ಕುಮಾರ್ ಹೇಳಿದರು. ಜುಲೈ 15ರಿಂದ ಆರಂಭವಾಗಲಿರುವ ವಿಧಾನಸಭಾ ಅಧಿವೇಶನದಲ್ಲಿ ಎಲ್ಲ ಅಂಕಿ-ಅಂಶ ಮತ್ತು ದಾಖಲೆಗಳೊಂದಿಗೆ ಸರ್ಕಾರದ ಹಗರಣಗಳನ್ನು ಸದನದಲ್ಲಿ ಪ್ರಸ್ತಾಪಿಸುವುದಾಗಿ ಅವರು ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿಯವರ ನೇತೃತ್ವದಲ್ಲೇ ಹಗರಣಗಳು ನಡೆಯುತ್ತಿವೆ ಮತ್ತು ಅವರ ನೇತೃತ್ವದಲ್ಲೇ ಅವುಗಳನ್ನು ಮುಚ್ಚಿಹಾಕಲಾಗುತ್ತಿದೆ, ಹಾಗಾಗಿ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದದುವರಿಯುವ ಹಕ್ಕಿಲ್ಲ ಎಂದು ಬಿಜೆಪಿ ಶಾಸಕ ಸುನೀಲ ಕುಮಾರ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಸುನೀಲ ಕುಮಾರ್, ಅಧಿಕಾರಕ್ಕೆ ಬಂದ ಒಂದು ವರ್ಷದ ಅವಧಿಯಲ್ಲಿ ಹಗರಣ ಮತ್ತು ಭ್ರಷ್ಟಾಚಾರದ ಸರಮಾಲೆಯನ್ನು ಸರ್ಕಾರ ಸೃಷ್ಟಿಸಿದೆ. ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಉಸ್ತುವಾರಿಯಾಗಿರುವ ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ, ಭಾರೀ ಪ್ರಮಾಣದ ಅವ್ಯವಹಾರ ನಡೆದಿದ್ದು, ಹಗರಣದಲ್ಲಿ ಅವರ ಕುಟುಂಬದವರ ಹೆಸರು ಕೇಳಿ ಬರುತ್ತಿರುವುದರಿಂದ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ ಎಂದು ಶಾಸಕ ಹೇಳಿದರು. ಲೋಕೋಪಯೋಗಿ ಇಲಾಖೆಯ ಟೆಂಡರ್ ಹಂಚುವ ಪ್ರಕ್ರಿಯೆಯಲ್ಲಿ ಹಗರಣ, ಹೌಸಿಂಗ್ ಬೋರ್ಡ್ ನಿಂದ ಮನೆ ಹಂಚುವುದರಲ್ಲಿ ಅವ್ಯವಹಾರ-ಪ್ರತಿ ಇಲಾಖೆಯಲ್ಲಿ ಒಂದಿಲ್ಲೊಂದು ಹಗರಣ ನಡೆಯುತ್ತಲೇ ಇದೆ ಎಂದು ಸುನೀಲ ಕುಮಾರ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ ಕೂಡ ರಾಮ ವಿರೋಧಿ -ಶಾಸಕ ಸುನೀಲ್ ಕುಮಾರ್