Shobha Karandlaje: ಗ್ಯಾರಂಟಿ ಯೋಜನೆಗಳಿಗಾಗಿ ಹಣ ಹೊಂದಿಸಲು ರಸ್ತೆ ಬದಿ ವ್ಯಾಪಾರಿಗಳಿಂದಲೂ ಸಿದ್ದರಾಮಯ್ಯ ಸರ್ಕಾರ ವಸೂಲಿ ಮಾಡ್ತಿದೆ
Shobha Karandlaje: ಗ್ಯಾರಂಟಿ ಯೋಜನೆಗಳಿಗಾಗಿ ರಸ್ತೆ ವ್ಯಾಪಾರಿಗಳಿಂದಲೂ ಸಿದ್ದರಾಮಯ್ಯ ಸರ್ಕಾರ ವಸೂಲಿ ಮಾಡ್ತಿದೆ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಸಣ್ಣಪುಟ್ಟ ಅಂಗಡಿ ಮಾಲೀಕರಿಂದಲೂ ಮಾಸಿಕ 15,000 ರೂ. ವಸೂಲಿ ಮಾಡ್ತಿದೆಯಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ. ಬಿಬಿಎಂಪಿಯವರು ಮಾಸಿಕ 15,000 ರೂ. ಕೇಳುತ್ತಿದ್ದಾರೆಂದು ಮಾಲೀಕರ ನಿಯೋಗದವರು ತಿಳಿಸಿದ್ದಾರೆ. ಇದೇ ರೀತಿ ವಸೂಲಿಗೆ ಇಳಿದರೆ ಅವರೆಲ್ಲರೂ ಬೆಂಗಳೂರು ಬಿಡುತ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಪೀಣ್ಯದ ಇಸ್ರೋ ಸೆಂಟರ್ಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದಾರೆ. ನಾಳೆ ಶನಿವಾರ ಬೆಳಗ್ಗೆ ಪ್ರಧಾನಿ ಮೋದಿ ವಿದೇಶದಿಂದ ನೇರವಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಕರ್ನಾಟಕ ಬಿಜೆಪಿ ನಾಯಕರು ಏರ್ಪಾಡುಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಹ ಕಾರ್ಯಕ್ರಮ ರೂಪುರೇಷೆ ಬಗ್ಗೆ ಪರಾಮರ್ಷೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಗ್ಯಾರಂಟಿ ಯೋಜನೆಗಳಿಗಾಗಿ ರಸ್ತೆ ವ್ಯಾಪಾರಿಗಳಿಂದಲೂ (Vendors) ಸಿದ್ದರಾಮಯ್ಯ (Siddaramaiah) ಸರ್ಕಾರ ವಸೂಲಿ ಮಾಡ್ತಿದೆ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದರು. (Union Agriculture Minister Shobha Karandlaje).
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೀತಿಲ್ಲ. ಈಶಾನ್ಯ ರಾಜ್ಯದವರು ಬೆಂಗಳೂರಿನಲ್ಲಿ ಅಂಗಡಿ ವ್ಯಾಪಾರ ನಡೆಸುತ್ತಿದ್ದು, ಅದರ ನಿಯೋಗ ನಮ್ಮ ಬಳಿ ಬಂದಿತ್ತು. ಸಣ್ಣಪುಟ್ಟ ಅಂಗಡಿ ಮಾಲೀಕರಿಂದಲೂ ಮಾಸಿಕ 15,000 ರೂ. ವಸೂಲಿ ಮಾಡ್ತಿದೆಯಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ. ಬಿಬಿಎಂಪಿಯವರು ಮಾಸಿಕ 15,000 ರೂ. ಕೇಳುತ್ತಿದ್ದಾರೆಂದು ಮಾಲೀಕರ ನಿಯೋಗದವರು ತಿಳಿಸಿದ್ದಾರೆ. ಇದೇ ರೀತಿ ವಸೂಲಿಗೆ ಇಳಿದರೆ ಅವರೆಲ್ಲರೂ ಬೆಂಗಳೂರು ಬಿಡುತ್ತಾರೆ. ರಾಜ್ಯದಲ್ಲಿ ಯಾವ ಅಧಿಕಾರಿಗಳೂ ಸಮಾಧಾನದಿಂದಿಲ್ಲ, ಸ್ಥಳ ತೋರಿಸದೆ ವರ್ಗಾವಣೆ ಮಾಡಲಾಗಿದೆ. IAS, IPS ಅಧಿಕಾರಿಗಳಿಗೂ ಸ್ಥಳ ತೋರಿಸದೆ ವರ್ಗಾವಣೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಇಂತಹ ಪರಿಸ್ಥಿತಿಯಿದೆ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗುಡುಗಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.