Loan waiver: ಸ್ತ್ರೀ ಶಕ್ತಿ ಸಂಘಗಳಲ್ಲಿ ತೆಗೆದುಕೊಂಡ ಸಾಲವನ್ನು ಮರುಪಾವತಿ ಮಾಡದ ಸುಸ್ತಿದಾರರ ಸಾಲ ಮನ್ನಾ ಆಗಲ್ಲ ಅಂತ ಸಿದ್ದರಾಮಯ್ಯ ಹೇಳಿದ್ದರು!

ಅರುಣ್​ ಕುಮಾರ್​ ಬೆಳ್ಳಿ

Updated on: Jun 08, 2023 | 10:58 AM

ಸಿದ್ದರಾಮಯ್ಯ ಹೇಳಿದ್ದನ್ನು ಮಹಿಳೆಯರು ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಅನ್ನೋದು ಅವರು ಮಾಡುತ್ತಿರುವ ವಾದದ ಮೂಲಕ ಗೊತ್ತಾಗುತ್ತದೆ.

ಬೆಂಗಳೂರು: ಮೊದಲು ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಅಡಿ ಮನೆಯ ಯಜಮಾನಿಗೆ ಸರ್ಕಾರ ನೀಡಲಿರುವ ಮಾಸಿಕ ರೂ. 2,000 ಸಹಾಯ ಧನ ಅತ್ತೆಗಾ ಸೊಸೆಗಾ ಅಂತ ವಿವಾದ ಶುರುವಾಯಿತು. ಕಾಂಗ್ರೆಸ್ ಪಕ್ಷ (Congress Party) ಅಧಿಕಾರಕ್ಕೆ ಬರುವ ಮೊದಲು ಅಂದರೆ ಚುನಾವಣೆಯ ಸಂದರ್ಭದಲ್ಲಿ ಸ್ವಸಹಾಯ ಸ್ತ್ರೀ ಶಕ್ತಿ ಸಂಘಗಳಲ್ಲಿ ಮಹಿಳೆಯರು ಪಡೆದ ಸಾಲವನ್ನು ಮನ್ನಾ ಮಾಡುವ ಬಗ್ಗೆ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ (Siddaramaiah) ಹೇಳಿದ್ದರ ಬಗ್ಗೆ ಈಗ ತಗಾದೆ ಆರಂಭಗೊಂಡಿದೆ. ಸಿದ್ದರಾಮಯ್ಯ ಹೇಳಿದ್ದನ್ನು ಮಹಿಳೆಯರು ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಅನ್ನೋದು ಅವರು ಮಾಡುತ್ತಿರುವ ವಾದದ ಮೂಲಕ ಗೊತ್ತಾಗುತ್ತದೆ. ತೆಗೆದುಕೊಂಡ ಸಾಲವನ್ನು ಯಾರೆಲ್ಲ ನಿಗದಿತವಾಗಿ ಮರುಪಾವತಿ ಮಾಡುತ್ತಾ ಬಂದಿದ್ದಾರೋ ಅವರ ಸಾಲವನ್ನು ಮನ್ನಾ ಮಾಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾರುಪಾವತಿ ಮಾಡದೆ ಸುಸ್ತಿದಾರರ ಪಟ್ಟಿಗೆ ಸೇರಿದವರ ಸಾಲ ಮನ್ನಾ ಆಗುವುದಿಲ್ಲ. ಸಿದ್ದರಾಮಯ್ಯ ಮಾತು ಕೇಳಿಸಿಕೊಳ್ಳಿ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.