ಚಿನ್ನದ ಫ್ರೇಮ್ ಇರುವ ಭಾವಚಿತ್ರವನ್ನು ನೀಡಿ ಸಿದ್ದರಾಮಯ್ಯಗೆ ಸನ್ಮಾನ

ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ್ದಾಗ ಮಾಜಿ ಸಿಎಂ ಸಿದ್ದರಾಮಯ್ಯಗೆ ಕಲಾತಂಡ, ವಾದ್ಯ ಮೇಳದ ಮೂಲಕ ಭರ್ಜರಿ ಸ್ವಾಗತ ಕೋರಿದ್ದಾರೆ.

ಇಂದು (ನ.13) ಬಾಗಲಕೋಟೆಯ ಬಾದಾಮಿಗೆ ಭೇಟಿ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಪಕ್ಷ ಮುಖಂಡರು ಅದ್ಧೂರಿ ಸ್ವಾಗತ ಕೋರಿದ್ದಾರೆ. ಜೆಸಿಬಿ ಮೂಲಕ ಹೂವಿನ ಮಳೆಗೈದು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ್ದಾಗ ಮಾಜಿ ಸಿಎಂ ಸಿದ್ದರಾಮಯ್ಯಗೆ ಕಲಾತಂಡ, ವಾದ್ಯ ಮೇಳದ ಮೂಲಕ ಭರ್ಜರಿ ಸ್ವಾಗತ ಕೋರಿದ್ದಾರೆ. ಬ್ಯಾಂಕಾಕ್​ನಲ್ಲಿ ತಯಾರು ಮಾಡಿಸಿರುವ ಚಿನ್ನದ ಫ್ರೇಮ್ ಇರುವ ಸಿದ್ದರಾಮಯ್ಯ ಭಾವಚಿತ್ರವನ್ನು ನೀಡಿ ಸನ್ಮಾನಿಸಿದ್ದಾರೆ. ಕಲ್ಯಾಣ ಮಂಟಪ ಉದ್ಘಾಟಿಸಿದ ಮಾಜಿ ಸಿಎಂಗೆ ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ಮಹೇಶ ಹೊಸಗೌಡ್ರ ಚಿನ್ನದ ಫ್ರೇಮ್ ಇರುವ ಭಾವಚಿತ್ರವನ್ನು ನೀಡಿ ಗೌರವಿಸಿದ್ದಾರೆ. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಾನು ಮುಖ್ಯಮಂತ್ರಿ ಆಗಿದ್ದಾಗ ಎಲ್ಲ ವರ್ಗದ ಜನರಿಗೆ ನ್ಯಾಯ ಸಿಗಬೇಕೆಂದು ಕೆಲಸ ಮಾಡಿದ್ದೆ. ಅನ್ನ ಭಾಗ್ಯ, ಕ್ಷೀರ ಭಾಗ್ಯ, ಕೃಷಿ ಭಾಗ್ಯ, ಇಂದಿರಾ ಕ್ಯಾಂಟೀನ್ ಸೇರಿ ವಿವಿಧ ಯೋಜನೆಗಳಿಂದ ಬಡವರಿಗೆ ಅನುಕೂಲ ಮಾಡಿದ್ದೇನೆ. ಯಾವುದೇ ಜಾತಿ, ಸಮಾಜದವರಿರಲಿ ಎಲ್ಲರೂ ಸಮಾನರು ಎಂದು ಹೇಳಿದರು.

Click on your DTH Provider to Add TV9 Kannada