ಮುಂಬರುವ ಚುನಾವಣೆಯಲ್ಲಿ ಸಿದ್ದರಾಮಯ್ಯ ಕೋಲಾರ ಜಿಲ್ಲೆಯ ಒಂದು ಕ್ಷೇತ್ರದಿಂದ ಸ್ಪರ್ಧಿಸುವುದು ಹೆಚ್ಚು ಕಡಿಮೆ ನಿಶ್ಚಿತ
ಪ್ರಸ್ತುತ ಬಾದಾಮಿ ಕ್ಷೇತ್ರದ ಶಾಸಕರಾಗಿರುವ ಅವರು ಆ ಕ್ಷೇತ್ರ ರಾಜಧಾನಿಯಿಂದ ದೂರ ಇರುವುದರಿಂದ ಅಲ್ಲಿಗೆ ಪದೇಪದೆ ಹೋಗಿ ಜನರ ಕಷ್ಟಸುಖಗಳನ್ನು ವಿಚಾರಿಸಿಕೊಳ್ಳುವುದು ಕಷ್ಟವಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು (Siddaramaiah) ಕೋಲಾರ ಜಿಲ್ಲೆಯ ಯಾವುದಾದರೊಂದು ಕ್ಷೇತ್ರದಿಂದ ಸ್ಪರ್ಧಿಸುವುದು ಹೆಚ್ಚು ಕಡಿಮೆ ಖಚಿತವಾಗಿದೆ. ಪ್ರಸ್ತುತ ಬಾದಾಮಿ (Badami) ಕ್ಷೇತ್ರದ ಶಾಸಕರಾಗಿರುವ ಅವರು ಆ ಕ್ಷೇತ್ರ ರಾಜಧಾನಿಯಿಂದ ಬಹಳ ದೂರ ಇರುವುದರಿಂದ ಅಲ್ಲಿಗೆ ಪದೇಪದೆ ಹೋಗಿ ಜನರ ಕಷ್ಟಸುಖಗಳನ್ನು ವಿಚಾರಿಸಿಕೊಳ್ಳುವುದು ಕಷ್ಟವಾಗುತ್ತಿದೆ. ಹಾಗಾಗಿ, ಬೆಂಗಳೂರಿಗೆ ಹತ್ತಿರವಾಗುವ ಕ್ಷೇತ್ರದಿಂದ ಸ್ಪರ್ಧಿಸಬಯಸಿದ್ದು ಕೋಲಾರ ಜಿಲ್ಲೆಯ ಜನ ಮತ್ತು ಪಕ್ಷದ ಕಾರ್ಯಕರ್ತರ ಒತ್ತಾಸೆಯೂ ಅದೇ ಆಗಿರುವುದರಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದರು. ಅಷ್ಟಾಗಿಯೂ ಅಂತಿಮ ನಿರ್ಣಯ ಹೈಕಮಾಂಡ್ (high command) ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.
Latest Videos