ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಪಂಚಮಸಾಲಿ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಪಂಚಮಸಾಲಿ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಅರುಣ್​ ಕುಮಾರ್​ ಬೆಳ್ಳಿ
|

Updated on: Dec 12, 2023 | 6:34 PM

ಸಭೆಯಲ್ಲಿ ನಡೆದ ಮಾತುಕತೆಯ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ಲಭ್ಯವಾಗುತ್ತಿವೆ. ಮೂರು ವರ್ಷಗಳಿಂದ ಮೀಸಲಾತಿಗಾಗಿ ಸ್ವಾಮೀಜಿ ಜೊತೆ ಹೋರಾಡುತ್ತಿರುವ ವಿಜಯಾನಂದ ಕಾಶಪ್ಪನವರ್ ಮುಖ್ಯಮಂತ್ರಿ ಬೇಡಿಕೆ ಈಡೇರಿಸುವುದಾಗಿ ಹೇಳಿದ್ದಾರೆ ಎಂದರೆ, ಸ್ವಾಮೀಜಿ ಅವರು ನಾಳೆ ಬೆಳಗಾವಿಯ ಚೆನ್ನಮ್ಮ ಸರ್ಕಲ್ ನಲ್ಲಿ ಮೀಸಲಾತಿಗಾಗಿ ಆಗ್ರಹಿಸಿ ನಡೆಯಲಿರುವ ಧರಣಿಯಲ್ಲಿ ಭಾಗವಹಿಸುವಂತೆ ಸಮಾಜದವರಿಗೆ ಕರೆ ನೀಡಿದ್ದಾರೆ.

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು ಪಂಚಮಸಾಲಿ (Panchamasali) ಲಿಂಗಾಯತ ಸಮಾಜಕ್ಕೆ 2ಎ ಮೀಸಲಾತಿಗಾಗಿ ಹೋರಾಡುತ್ತಿರುವ ಕೂಡಲಸಂಗಮದ ಶ್ರೀಗಳಾದ ಬಸವ ಜಯಮೃತ್ಯುಂಜಯ ಸ್ವಾಮಿ (Basava Jaya Mruthyunjaya Swamiji), ಸಮಾಜದ ಮುಖಂಡರು ಹಾಗೂ ಶಾಸಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ತಮ್ಮ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕೆಂದು ಸ್ವಾಮೀಜಿ ಬಹಳ ದಿನಗಳಿಂದ ಹೋರಾಟ ನಡೆಸುತ್ತಿರುವುದನ್ನು ಕನ್ನಡಿಗರು ನೋಡಿದ್ದಾರೆ. ಸಭೆಗೆ ಸಿದ್ದರಾಮಯ್ಯ ಅವರು ಪಂಚಮಸಾಲಿ ಸಮಾಜವನ್ನು ಪ್ರತಿನಿಧಿಸುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಆಗಮಿಸಿದರು. ದೃಶ್ಯಗಳಲ್ಲಿ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ವಿನಯ್ ಕುಲಕರ್ಣಿ, ಎಂವೈ ಪಾಟೀಲ್, ಬಿಆರ್ ಪಾಟೀಲ್, ವಿಜಯಾನಂದ ಕಾಶಪ್ಪನವರ್ ಮತ್ತು ಅವರ ಪತ್ನಿ ವೀಣಾ ಕಾಶಪ್ಪನವರ್, ಅರವಿಂದ್ ಬೆಲ್ಲದ್ ಮೊದಲಾದವರನ್ನು ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ