ಎಸ್ ಟಿ ಮೀಸಲಾತಿ ಹೆಚ್ಚಳ ಸಂಬಂಧಿಸಿದಂತೆ ಸಮುದಾಯದ ಮುಖಂಡರ ಜೊತೆ ಸಿದ್ದರಾಮಯ್ಯ ಸಭೆ
ಸಿದ್ದರಾಮಯ್ಯನವರು ಶುಕ್ರವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ಎಸ್ ಟಿ ಸಮುದಾಯಕ್ಕೆ ಸೇರಿದ ಕಾಂಗ್ರೆಸ್ ನಾಯಕರೊಂದಿಗೆ ಸಭೆ ನಡೆಸಿದರು. ಎಸ್ ಟಿ ಮೀಸಲಾತಿಯನ್ನು ಶೇಕಡ 7.5 ಕ್ಕೆ ಹೆಚ್ಚಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದರು
ಬೆಂಗಳೂರು: ಗುರುವಾರ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಜೊತೆ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು (Siddaramaiah) ಶುಕ್ರವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ಎಸ್ ಟಿ ಸಮುದಾಯಕ್ಕೆ ಸೇರಿದ ಕಾಂಗ್ರೆಸ್ ನಾಯಕರೊಂದಿಗೆ ಸಭೆ ನಡೆಸಿದರು. ಎಸ್ ಟಿ ಮೀಸಲಾತಿಯನ್ನು (ST reservation) ಶೇಕಡ 7.5 ಕ್ಕೆ ಹೆಚ್ಚಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯುಟಿ ಖಾದರ್ (UT Khader), ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಪ್ರಕಾಶ್ ರಾಠೋಡ್ ಮತ್ತು ಸಮುದಾಯಕ್ಕೆ ಸೇರಿದ ಹಲವು ನಾಯಕರು ಹಾಜರಿದ್ದರು.
Latest Videos