ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ್ತು ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಪರ ಮತ ಯಾಚಿಸಿದ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Apr 27, 2024 | 11:15 AM

ಮೇ 7 ರಂದು ಮತದಾನ ನಡೆಯುವ ಕ್ಷೇತ್ರಗಳಲ್ಲಿ ಶಿವಮೊಗ್ಗವೊಂದನ್ನು ಹೊರತುಪಡಿಸಿ ಉಳಿದವೆಲ್ಲ ಉತ್ತರ ಕರ್ನಾಟಕದ ಭಾಗವಾಗಿರುವುದರಿಂದ, ಪ್ರಖರ ಬಿಸಲಲ್ಲಿ ಪ್ರಚಾರಕ್ಕೆ ತೆರಳಿರುವ ನಾಯಕರು ಬಸವಳಿಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿನ್ನೆ ತಮ್ಮ ಹುಟ್ಟೂರಿನಲ್ಲಿ ಮತ ಚಲಾಯಿಸಿದ ಬಳಿಕ ವಿಜಯಪುರ, ಕಲಬುರಗಿ ಮತ್ತು ಬೀದರ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿ ಪ್ರಚಾರ ನಡೆಸಿದರು.

ಬೀದರ್: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ (Lok Sabha polls) ಎರಡನೇ ಹಂತದ ಮತದಾನಕ್ಕೆ ಎರಡು ವಾರಗಳಿಗಿಂತ ಕಡಿಮೆ ಅವಧಿ ಉಳಿದಿರುವುದರಿಂದ ಎಲ್ಲ ಪಕ್ಷಗಳ ನಾಯಕರು ಮತದಾನ ನಡೆಯಬೇಕರುವ 14 ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ (aggressive campaigning) ನಡೆಸಿದ್ದಾರೆ. ಮೇ 7 ರಂದು ಮತದಾನ ನಡೆಯುವ ಕ್ಷೇತ್ರಗಳಲ್ಲಿ ಶಿವಮೊಗ್ಗವೊಂದನ್ನು ಹೊರತುಪಡಿಸಿ ಉಳಿದವೆಲ್ಲ ಉತ್ತರ ಕರ್ನಾಟಕದ ಭಾಗವಾಗಿರುವುದರಿಂದ, ಪ್ರಖರ ಬಿಸಲಲ್ಲಿ ಪ್ರಚಾರಕ್ಕೆ ತೆರಳಿರುವ ನಾಯಕರು ಬಸವಳಿಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ (CM Siddaramaiah) ನಿನ್ನೆ ತಮ್ಮ ಹುಟ್ಟೂರಿನಲ್ಲಿ ಮತ ಚಲಾಯಿಸಿದ ಬಳಿಕ ವಿಜಯಪುರ, ಕಲಬುರಗಿ ಮತ್ತು ಬೀದರ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿ ಪ್ರಚಾರ ನಡೆಸಿದರು. ಗಮನಿಸಬೇಕಾದ ಸಂಗತಿಯೆಂದರೆ, ಸಿದ್ದರಾಮಯ್ಯ ಉತ್ತರ ಕರ್ನಾಟಕದಲ್ಲೂ ಸಾಕಷ್ಟು ಜನಪ್ರಿಯರು ಮತ್ತು ಅವರು ಹೋದಡೆಯೆಲ್ಲ ಜನ ಸೇರುತ್ತಾರೆ. ಅವರನ್ನು ಒಬ್ಬ ಮಾಸ್ ಲೀಡರ್ ಎಂದು ವಿರೋಧ ಪಕ್ಷಗಳ ನಾಯಕರೂ ಗುರುತಿಸುತ್ತಾರೆ. ಬೀದರ್ ನಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಮತ್ತು ಸಚಿವ ಈಶ್ವರ್ ಖಂಡ್ರೆ ಅವರ ಮಗ ಸಾಗರ್ ಖಂಡ್ರೆ ಅವರ ಪರವಾಗಿ ಮತ ಯಾಚಿಸಲು ಪೋಡಿಯಂ ಬಳಿ ಬಂದಾಗ ವೇದಿಕೆಯ ಮೇಲಿದ್ದ ನಾಯಕರೆಲ್ಲ ಎದ್ದುನಿಲ್ಲುವುದನ್ನು ದೃಶ್ಯಗಳಲ್ಲಿ ನೋಡಬಹುದು. ಅದರೆ ಸಿದ್ದರಾಮಯ್ಯ ಎಲ್ಲರನ್ನು ಕೂರುವಂತೆ ಹೇಳಿ ತಮ್ಮ ಮಾತು ಆರಂಭಿಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಲೋಕಸಭಾ ಚುನಾವಣೆ 2024: ಕಲ್ಯಾಟ ಮಂಟಪದಿಂದ ನೇರವಾಗಿ ಬಂದು ಮತ ಚಲಾಯಿಸಿದ ನವದಂಪತಿಗಳು; ಇಲ್ಲಿವೆ ಫೋಟೋಸ್​

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.