ಗೃಹ ಜ್ಯೋತಿ ಯೋಜನೆಗೆ ಚಾಲನೆ, ವೇದಿಕೆ ಮೇಲೆ ಫಲಾನುಭವಿ ಮಹಿಳೆಯೊಬ್ಬರಿಗೆ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಬಗ್ಗೆ ವಿಚಾರಿಸಿದ ಸಿದ್ದರಾಮಯ್ಯ
ಯೋಜನೆಗೆ ಚಾಲನೆ ನೀಡಿದ ಬಳಿಕ, ಜಿಲ್ಲೆಯ ಬೇರೆ ಬೇರೆ ಊರುಗಳ ಹತ್ತು ಫಲಾನುಭವಿಗಳಿಗೆ ಸಾಂಕೇತಿಕವಾಗಿ ಶೂನ್ಯ ವಿದ್ಯುತ್ ಬಿಲ್ಗಳನ್ನು ವೇದಿಕೆ ಮೇಲೆ ನೀಡಲಾಯಿತು.
ಕಲಬುರಗಿ: ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ ಯೋಜನೆಗೆ ಇಂದು ಕಲಬುರಗಿಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಜೊತೆ ಹಲವಾರು ಸಚಿವರು ಮತ್ತು ಶಾಸಕರು ಭಾಗವಹಿಸಿದ್ದರು. ಯೋಜನೆಗೆ ಚಾಲನೆ ನೀಡಿದ ಬಳಿಕ, ಜಿಲ್ಲೆಯ ಬೇರೆ ಬೇರೆ ಊರುಗಳ ಹತ್ತು ಫಲಾನುಭವಿಗಳಿಗೆ (beneficiaries) ಸಾಂಕೇತಿಕವಾಗಿ ಶೂನ್ಯ ವಿದ್ಯುತ್ ಬಿಲ್ಗಳನ್ನು ವೇದಿಕೆ ಮೇಲೆ ನೀಡಲಾಯಿತು. ಆ ಸಂದರ್ಭದಲ್ಲಿ ಒಬ್ಬ ಮಹಿಳಾ ಫಲಾನುಭವಿಯೊಂದಿಗೆ ಮಾತಾಡಿದ ಮುಖ್ಯಮಂತ್ರಿ, ಗೃಹ ಲಕ್ಷ್ಮಿ ಯೋಜನೆಗೆ ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೋ ಇಲ್ಲವೋ ಅಂತ ವಿಚಾರಿಸಿದರು. ಕಲಬುರಗಿಯ ನೂತನ ವಿದ್ಯಾಲಯ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ