ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್ಡಿ ಕುಮಾರಸ್ವಾಮಿ
ಹೆಚ್.ಡಿ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯರನ್ನು ಲೀಸ್ ಆಧಾರಿತ ಮುಖ್ಯಮಂತ್ರಿ ಎಂದಿದ್ದಾರೆ. ಮನರೇಗಾ ಯೋಜನೆ ಬದಲಾವಣೆ ಮತ್ತು ಅವ್ಯವಹಾರಗಳ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಿದ್ದ ಬಹಿರಂಗ ಚರ್ಚೆಯ ಸವಾಲನ್ನು ಕುಮಾರಸ್ವಾಮಿ ಸ್ವೀಕರಿಸಿದ್ದಾರೆ. ಯೋಜನೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಬದಲಾವಣೆ ಮಾಡಲಾಗಿದೆಯೇ ಹೊರತು ಹೆಸರು ಬದಲಾವಣೆಗೆ ಕಾರಣವೇನು ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು, ಜನವರಿ 10: ಸಿದ್ದರಾಮಯ್ಯ ಒಬ್ಬ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ದೇವರಾಜ ಅರಸು ದಾಖಲೆ ಮುರಿದ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಡಿ.ದೇವರಾಜ ಅರಸು ದಾಖಲೆ ಮುರಿದೆ ಅಂತಾ ಹೇಳ್ತಿದ್ದಾರಲ್ಲಾ. ಹಿಂದೆ ಇಂದಿರಾಗಾಂಧಿ ವಿರುದ್ಧ ಅರಸು ಸೆಡ್ಡು ಹೊಡೆದು ನಿಂತಿದ್ದರು. ಈಗ ರಾಹುಲ್ ಗಾಂಧಿ ಯಾವಾಗ ಹೋಗು ಅಂತಾರೆ ಅಂತಾ ಕಾಯುತ್ತಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

