ಐಎಂಎ ಹಗರಣದಲ್ಲಿ ಸಿದ್ದರಾಮಯ್ಯ ಕೂಡ ಫಲಾನುಭವಿ ಎಂದ ಬಸನಗೌಡ ಪಾಟೀಲ್ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Oct 15, 2024 | 5:11 PM

ಕಾಂಗ್ರೆಸ್ ನಾಯಕರಿಗೆ ಮುಸಲ್ಮಾನರ ಬಗ್ಗೆ ಕಾಳಜಿ ಇಲ್ಲ, ಹಿಂದೆ ಐಎಂಎ ಹಗರಣದ ರೂವಾರಿಯು ಬಡ ಮುಸಲ್ಮಾನರಿಗೆ ಕೋಟ್ಯಾಂತರ ಹಣ ವಂಚಿಸಿ ಸಿಕ್ಕಿಬಿದ್ದಾಗ ಸಿದ್ದರಾಮಯ್ಯ ₹ 5 ಕೋಟಿ, ರೋಷನ್ ಬೇಗ್​ಗೆ ₹8 ಕೋಟಿ, ಈಗಿನ ಗೃಹಮಂತ್ರಿಗೆ ₹ 2ಕೋಟಿ ಮತ್ತು ಜಮೀರ್​ ಅಹ್ಮದ್ ಸುಮಾರು ₹50 ಕೋಟಿ ಸಂದಾಯ ಮಾಡಿದನೆಂದು ಯತ್ನಾಳ್ ಹೇಳಿದರು.

ವಿಜಯಪುರ: ವಿಜಯಪುರದಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ನಡೆದ ಹೋರಾಟದಲ್ಲಿ ಭಾಗವಹಿಸಿ ಮಾತಾಡಿದ ಸ್ಥಳೀಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜಿಲ್ಲೆಯಲ್ಲಿ ವಕ್ಫ್ ಮಂಡಳಿಗೆ ಸೇರಿದ ಜಮೀನು 11,000 ಎಕರೆ ಇದೆ ಎಂದಿರುವ ಸಚಿವ ಜಮೀರ್ ಅಹ್ಮದ್​ರನ್ನು ತರಾಟೆಗೆ ತೆಗೆದುಕೊಂಡರು. ಮುಂದಿನ ಸಲ ವಿಜಯಪುರದಿಂದ ಮುಸಲ್ಮಾನ ಶಾಸಕ ಅಂತ ಹೇಳಿರುವ ಜಮೀರ್ ಅವರು ತಾಕತ್ತಿದ್ದರೆ ತಾನೇ ಬಂದು ನನ್ನ ವಿರುದ್ಧ ಸ್ಪರ್ಧಿಸಲಿ ಎಂದು ಯತ್ನಾಳ್ ಸವಾಲೆಸೆದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Yatnal vs Muslim Leaders: ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಸಿಡಿ ಬಿಡುಗಡೆ ಮಾಡಲಿ: ಯತ್ನಾಳ್​ ಸವಾಲ್​

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.