ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ, ಬಿಜೆಪಿ 140 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಪುನಃ ಅಧಿಕಾರಕ್ಕೆ ಬರಲಿದೆ: ಬಿ ಎಸ್ ಯಡಿಯೂರಪ್ಪ
ಕರಾವಳಿ ಭಾಗದಲ್ಲಿ ಪ್ರವಾಸ ಮಾಡಿರುವ ತಮಗೆ ಇಲ್ಲಿನ ಎಲ್ಲ ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಕಾರ್ಯಕರ್ತರು ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಯಡಿಯೂರಪ್ಪ ಹೇಳಿದರು,
ಉಡುಪಿ: ಮುಂಬರುವ ವಿಧಾನಸಭೆ ಚುನಾವಣೆಯನ್ನು ಗೆದ್ದು ಅದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಉಡುಗೊರೆ ನೀಡುತ್ತೇವೆ ಅಂತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಗೇಲಿ ಮಾಡಿದರು. ಉಡುಪಿಯಲ್ಲಿ ಟಿವಿ9 ವರದಿಗಾರನೊಂದಿಗೆ ಮಾತಾಡಿದ ಬಿಎಸ್ ವೈ, ಸಿದ್ದರಾಮಯ್ಯನ ಭ್ರಮೆಯಲ್ಲಿದ್ದಾರೆ ಎಂದು ಹೇಳಿ, ಅವರ ಪಕ್ಷದ ಹಿರಿಯ ನಾಯಕ ಸತೀಶ್ ಜಾರಕಿಹೊಳಿ ಹಿಂದೂಗಳನ್ನು ಅಪಮಾನ ಮಾಡಿದ್ದಾರೆ, ಅವರು ಬಹಿರಂಗವಾಗಿ ಎಲ್ಲ ಹಿಂದೂಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಕರಾವಳಿ ಭಾಗದಲ್ಲಿ ಪ್ರವಾಸ ಮಾಡಿರುವ ತಮಗೆ ಇಲ್ಲಿನ ಎಲ್ಲ ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಕಾರ್ಯಕರ್ತರು ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸವಿದೆ ಮತ್ತು ರಾಜ್ಯದಲ್ಲಿ ಬಿಜೆಪಿ ಕನಿಷ್ಟ 140 ಸೀಟುಗಳನ್ನು ಗೆದ್ದು ಪುನಃ ಅಧಿಕಾರಕ್ಕೆ ಬರಲಿದೆ ಎಂದು ಯಡಿಯೂರಪ್ಪ ಹೇಳಿದರು.