ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ

Updated on: Jun 21, 2026 | 7:21 PM

ಬಿಕೆ ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಇಂದು (ಜೂನ್ 21) ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಧ್ವಜ ಹಸ್ತಾಂತರಿಸಿದರು. ಬಳಿಕ ಎಲ್ಲಾ ನಾಯಕರು ಪಕ್ಷ ಸಂಘಟನೆ ಬಗ್ಗೆ ವಿವರವಾಗಿ ಮಾತನಾಡಿದರು. ಇನ್ನು ಕಾರ್ಯಕ್ರಮದಲ್ಲಿ ಕೊನೆಯದಾಗಿ ಭಾಷಣ ಮಾಡಲು CWC ಸದಸ್ಯತ್ವ, ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಅವಕಾಶ ನೀಡಲಾಗಿದ್ದು, ಇದಕ್ಕೆ ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿದ ಪ್ರಸಂಗ ನಡೆಯಿತು. ಎಂದಿನಂತೆ ನಾನು ಕೊನೆಯ ಭಾಷಣಕಾರ. ಹೀಗಾಗಿ ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಹರಿಪ್ರಸಾದ್ ಗೆ ಮನವಿ ಮಾಡಿ ಹಾಸ್ಯ ಚಟಾಕಿ ಹಾರಿಸಿದರು.

ಬೆಂಗಳೂರು, (ಜೂನ್ 21): ಬಿಕೆ ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಇಂದು (ಜೂನ್ 21) ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಧ್ವಜ ಹಸ್ತಾಂತರಿಸಿದರು. ಬಳಿಕ ಎಲ್ಲಾ ನಾಯಕರು ಪಕ್ಷ ಸಂಘಟನೆ ಬಗ್ಗೆ ವಿವರವಾಗಿ ಮಾತನಾಡಿದರು. ಇನ್ನು ಕಾರ್ಯಕ್ರಮದಲ್ಲಿ ಕೊನೆಯದಾಗಿ ಭಾಷಣ ಮಾಡಲು CWC ಸದಸ್ಯತ್ವ, ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಅವಕಾಶ ನೀಡಲಾಗಿದ್ದು, ಇದಕ್ಕೆ ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿದ ಪ್ರಸಂಗ ನಡೆಯಿತು. ಎಂದಿನಂತೆ ನಾನು ಕೊನೆಯ ಭಾಷಣಕಾರ. ಹೀಗಾಗಿ ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಹರಿಪ್ರಸಾದ್ ಗೆ ಮನವಿ ಮಾಡಿ ಹಾಸ್ಯ ಚಟಾಕಿ ಹಾರಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More