ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ? ಕ್ಷೇತ್ರ ಸಂಚರಿಸಿ ಜನರ ಸಮಸ್ಯೆ ಆಲಿಸುತ್ತಿರುವ ಶಾಸಕ ಡಾ ಯತೀಂದ್ರ
ಮುಂದಿನ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ಸಿದ್ದು ಸ್ಪರ್ಧೆ ಸಾಧ್ಯತೆ. ತಂದೆ ಆಗಮನ ಹಿನ್ನೆಲೆ ಅಲರ್ಟ್ ಆದ ಪುತ್ರ, ಶಾಸಕ ಡಾ.ಯತೀಂದ್ರ. ವರುಣಾ ಕ್ಷೇತ್ರದಲ್ಲೇ ಬೀಡು ಬಿಟ್ಟ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ.
ಮೈಸೂರು: ಮುಂದಿನ ಚುನಾವಣೆಯಲ್ಲಿ ವರುಣ ಕ್ಷೇತ್ರದಲ್ಲಿ ಸಿದ್ದು ಸ್ಪರ್ಧೆ ಸಾಧ್ಯತೆ ಹಿನ್ನೆಲೆ ತಂದೆ ಆಗಮನದಿಂದಾಗಿ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿದ್ದಾರೆ. ಶಾಸಕ ಯತೀಂದ್ರ ಕ್ಷೇತ್ರದಲ್ಲೇ ಬೀಡು ಬಿಟ್ಟಿದ್ದಾರೆ. ಪ್ರತಿದಿನ ಕ್ಷೇತ್ರದಲ್ಲಿ ಸಂಚರಿಸಿ ಜನರ ಅಹವಾಲು ಆಲಿಸುತ್ತಿದ್ದಾರೆ. ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರದ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ರೈತರ ಸಮಸ್ಯೆ ಆಲಿಸಿದ್ದಾರೆ. ಅಲ್ಲದೆ ಸ್ಥಳದಲ್ಲೇ ಅಧಿಕಾರಿಗಳಿಗೆ ಸಮಸ್ಯೆಗೆ ಪರಿಹಾರ ನೀಡುವಂತೆ ಸೂಚಿಸಿದ್ದಾರೆ. ಎಲ್ಲಾ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಬಗೆಹರಿಸಲು ತಿಳಿಸಿದ್ದಾರೆ. ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ.
Published on: Dec 07, 2022 08:29 AM
Latest Videos