Karnataka Assembly Polls: ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗ ಅತ್ತಿದ್ದನ್ನು ಮಿಮಿಕ್ ಮಾಡಿದ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Apr 27, 2023 | 4:19 PM

ಬಿಜೆಪಿಯೇ ಲಿಂಗಾಯತ ಸಮುದಾಯದ ನಾಯಕರನ್ನು ಅತ್ಯಂತ ಅಗೌರವದಿಂದ ಟ್ರೀಟ್ ಮಾಡಿದೆ ಎಂದು ಸಿದ್ದರಾಮಯ್ಯ ಹೇಳಿದರು

ಬಳ್ಳಾರಿ: ಜಿಲ್ಲೆಯ ಸಿರಗುಪ್ಪದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಎಂ ನಾಗರಾಜ (BM Nagaraj) ಪರವಾಗಿ ಇಂದು ಪ್ರಚಾರ ಮಾಡಿದ ಸಿದ್ದರಾಮಯ್ಯ (Siddaramaiah), ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ (BS Yediyurappa) ಮಿಮಿಕ್ರಿ ಮಾಡಿ ನೆರೆದ ಜನರನ್ನು ನಗೆಗಡಲಲ್ಲಿ ಮುಳುಗಿಸಿದರು. ಮಾತಾಡುವಾಗ ಲಿಂಗಾಯತ ಸಮುದಾಯದ ವಿಷಯವನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿ ಒಬ್ಬೇಒಬ್ಬ ಲಿಂಗಾಯತ ಅಬ್ಯರ್ಥಿಗೆ ಟಿಕೆಟ್ ನೀಡಿಲ್ಲ ಎಂದು ಹೇಳಿದರು. ಲಿಂಗಾಯತರಾಗಿದ್ದ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡದೆ ಪಕ್ಷದಿಂದ ಹೊರಹಾಕಿದರು ಎಂದು ಹೇಳಿದ ಸಿದ್ದರಾಮಯ್ಯ, ಲಿಂಗಾಯತರಾಗಿರುವ ಯಡಿಯೂರಪ್ಪರನ್ನು ಎರಡು ವರ್ಷ ಕಾಲ ಮುಖ್ಯಮಂತ್ರಿ ಮಾಡಿ ಆಮೇಲೆ ಕೆಳಗಿಳಿಸಿದರು. ಬಿಜೆಪಿಯೇ ಲಿಂಗಾಯತ ಸಮುದಾಯದ ನಾಯಕರನ್ನು ಅತ್ಯಂತ ಅಗೌರವದಿಂದ ಟ್ರೀಟ್ ಮಾಡಿದೆ ಎಂದು ಸಿದ್ದರಾಮಯ್ಯ ಹೇಳಿದರು

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾಅ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.