Former minister takes on CM; ಜಾತಿ ಜನಗಣತಿಗೆ ನಡೆಸಿದ ಸಿದ್ದರಾಮಯ್ಯ ಸಮಿತಿ ನೀಡಿದ ವರದಿಯನ್ನು ಸ್ವೀಕರಿಸಲೂ ಇಲ್ಲ: ಬಿ ಶ್ರೀರಾಮುಲು

ಅರುಣ್​ ಕುಮಾರ್​ ಬೆಳ್ಳಿ

Updated on: Jun 08, 2023 | 7:12 PM

ಮುಖ್ಯಮಂತ್ರಿ ಸಿದ್ದರಾಮಯ್ಯ ದ್ವಂದ್ವ ನೀತಿ ಅನುಸರಿಸುತ್ತಾರೆ, ಅಧಿಕಾರವಿದ್ದಾಗ ಒಂದು ಇಲ್ಲದಾಗ ಮತ್ತೊಂದು ಮಾತಾಡುತ್ತಾರೆ ಎಂದು ಶ್ರೀರಾಮುಲು ಹೇಳಿದರು.

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋತು ಬಹಳ ದಿನಗಳ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ನಾಯಕ ಬಿ ಶ್ರೀರಾಮುಲು (B Sriramulu) ರಾಜ್ಯ ಸರ್ಕಾರ ಮೀಸಲಾತಿ ವಿಷಯದಲ್ಲಿ ಹಸ್ತಕ್ಷೇಪ ಮಾಡಿದರೆ, ಜನ ಮತ್ತು ತಾವು ಅದನ್ನು ಯಾವ ಕಾರಣಕ್ಕೂ ಸಹಿಸಲ್ಲ, ಪ್ರಾಣ ಕೊಟ್ಟೇವು ಆದರೆ ಈ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ದ್ವಂದ್ವ ನೀತಿ ಅನುಸರಿಸುತ್ತಾರೆ, ಅಧಿಕಾರವಿದ್ದಾಗ ಒಂದು ಇಲ್ಲದಾಗ ಮತ್ತೊಂದು ಮಾತಾಡುತ್ತಾರೆ ಎಂದು ಶ್ರೀರಾಮುಲು ಹೇಳಿದರು. ಜಾತಿ ಜನಗಣತಿ (caste census) ವಿಚಾರ ಮಾತಾಡಿದ ಅವರು ಸಿದ್ದರಾಮಯ್ಯ ತಾವೇ ಅದಕ್ಕೆ ಆದೇಶ ನೀಡಿ ಸಮಿತಿಯನ್ನೂ ರಚಿಸಿ ಗಣತಿ ಮಾಡಿಸಿದ್ದರು. ಆದರೆ, ನಂತರ ಸಮಿತಿ ಸಲ್ಲಿಸಿದ ವರದಿಯನ್ನು ಅವರು ಸ್ವೀಕರಿಸಲೂ ಇಲ್ಲ ಎಂದು ಮಾಜಿ ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.