ಪದತ್ಯಾಗಕ್ಕೂ ಮುನ್ನವೇ ತಮ್ಮ ಮಹತ್ವದ ಆಸೆ ಈಡೇರಿಸಿಕೊಳ್ಳಲು ಮುಂದಾದ ಸಿದ್ದರಾಮಯ್ಯ

Updated on: May 27, 2026 | 4:15 PM

ಕಳೆದ 9 ವರ್ಷಗಳಿಂದ ನಿರಂತರವಾಗಿ ಸಂಚಲನ ಸೃಷ್ಟಿಸಿದ್ದ ಕರ್ನಾಟಕ ಜಾತಿಗಣತಿ ವರದಿ ಸಂಬಂಧ ಮಹತ್ವದ ತೀರ್ಮಾನಕ್ಕೆ ಬಂದಿದ್ದಾರೆ. ಇನ್ನೇನು ನಾಳೆ(ಮೇ 28) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಇದರಿಂದ ತಮ್ಮ ಕನಸಿನ ಸಿದ್ದರಾಮಯ್ಯ ಜಾತಿಗಣತಿ ವರದಿ ಸ್ವೀಕಾರಕ್ಕೆ ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಗೆ ಸಿಎಂ ಬುಲಾವ್ ನೀಡಿದ್ದಾರೆ.

ಬೆಂಗಳೂರು, (ಮೇ 27): ಕರ್ನಾಟಕ ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿ ಎನ್ನುವ ದಾಖಲೆಯನ್ನು ಸಿದ್ದರಾಮಯ್ಯ (Siddaramaiah) ಬರೆದಿದ್ದಾರೆ. ಅಲ್ಲದೇ ಅತಿ ಹೆಚ್ಚು ಬಜೆಟ್ ಮಂಡಿಸಿದ ಸಿಎಂ ಎನ್ನುವ ಹೆಗ್ಗಳಿಕೆ ಅವರಿಗಿದೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹಲವು ಜನರಪರ ಕಾರ್ಯಕ್ರಮಗಳಿಂದ ಜನ ಮನ್ಣಣೆ ಗಳಿಸಿದ್ದಾರೆ. ಅದರಲ್ಲೂ ಪ್ರಮುಖವಾಗಿ ಹಿಂದುಳಿದ, ಅಹಿಂದ ವರ್ಗಗಳ ಪರವಾಗಿ ನಿಂತಿದ್ದಾರೆ. ಇದರಿಂದ ಅವರನ್ನ ಅಹಿಂದ ನಾಯಕ ಎಂದು ಕರೆಯಲಾಗುತ್ತೆ. ಅದರಂತೆ ಕಳೆದ 9 ವರ್ಷಗಳಿಂದ ನಿರಂತರವಾಗಿ ಸಂಚಲನ ಸೃಷ್ಟಿಸಿದ್ದ ಕರ್ನಾಟಕ ಜಾತಿಗಣತಿ ವರದಿ ಸಂಬಂಧ ಮಹತ್ವದ ತೀರ್ಮಾನಕ್ಕೆ ಬಂದಿದ್ದಾರೆ. ಇನ್ನೇನು ನಾಳೆ(ಮೇ 28) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಇದರಿಂದ ತಮ್ಮ ಕನಸಿನ ಸಿದ್ದರಾಮಯ್ಯ ಜಾತಿಗಣತಿ ವರದಿ ಸ್ವೀಕಾರಕ್ಕೆ ಮುಂದಾಗಿದ್ದಾರೆ.

ಇದಕ್ಕೆ ಪೂರಕವೆಂಬಂತೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಗೆ ಸಿಎಂ ಬುಲಾವ್ ನೀಡಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಗೆ ಇಂದು ಮೇ 27) ಸಂಜೆ ವಿಧಾನಸೌಧಕ್ಕೆ ಬರುವಂತೆ ತಿಳಿಸಿದ್ದಾರೆ. ಹೀಗಾಗಿ ರಾಜೀನಾಮೆಗೂ ಮುನ್ನವೇ ಅಂದರೆ ಇಂದೇ ಜಾತಿಗಣತಿ ವರದಿ ಸ್ವೀಕಾರ ಮಾಡುವ ಸಾಧ್ಯತೆ ಇದೆ. ಕೆಳದ ಬಾರಿ ಜಾತಿಗಣತಿ ವರದಿ ಸ್ವೀಕಾರ ಮಾಡಿಲ್ಲವೆಂಬ ಆರೋಪ ಇತ್ತು. ಮುಂದೆ ಎಂದೂ ಈ ರೀತಿ ಆರೋಪ ಬರಬಾರದು ಎಂದು ಅರಿತ ಸಿದ್ದರಾಮಯ್ಯ, ಪದತ್ಯಾಗಕ್ಕೂ ಮುನ್ನ ಜಾತಿಗಣತಿ ವರದಿ ಸ್ವೀಕರಿಸಲು ಪ್ಲ್ಯಾನ್ ಮಾಡಿದ್ದಾರೆ. ಇದರೊಂದಿಗೆ ಅಧಿಕಾರಿದಲ್ಲಿದ್ದಾಗಲೇ ಜಾತಿಗಣತಿ ಸ್ವೀಕಾರ ಮಾಡಿದರು ಎಂಬ ಹೆಗ್ಗಳಿಕೆಗೆ ಪಾತ್ರರಾಗಲು ಮುಂದಾಗಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ಸುದ್ದಿ ಬೆನ್ನಲ್ಲೇ ತಮ್ಮ ಮಹತ್ವಕಾಂಕ್ಷಿ ಯೋಜನೆ ನೆನೆದ ಸಿದ್ದರಾಮಯ್ಯ, ಇದು ವಿದಾಯದ ಸುಳಿವೇ?

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More