AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀರ್ಘಾವಧಿ ಸಿಎಂ: ದೇವರಾಜ ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು

ದೀರ್ಘಾವಧಿ ಸಿಎಂ: ದೇವರಾಜ ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು

ರಾಮ್​, ಮೈಸೂರು
| Edited By: |

Updated on:Jan 05, 2026 | 3:16 PM

Share

ಕರ್ನಾಟಕದ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ (Siddaramaiah) ಅವರು ಪಾತ್ರರಾಗಲು ಕೇವಲ ಒಂದೇ ದಿನ ಬಾಕಿ ಇದ್ದು, ದೇವರಾಜ ಅರಸು ಅವರ ದಾಖಲೆಯನ್ನು ನಾಳೆ (ಜನವರಿ 06) ಮುರಿಯಲಿದ್ದಾರೆ. 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು (D Devaraj urs )ಕರ್ನಾಟಕದ ಸಿಎಂ‌ ಆಗಿದ್ದ‌ರು. ಇದೀಗ ಈ ದಾಖಲೆಯನ್ನು ನಾಳೆ ಸಿದ್ದರಾಮಯ್ಯ ಮುರಿಯಲಿದ್ದಾರೆ.

ಮೈಸೂರು, (ಜನವರಿ 05): ಕರ್ನಾಟಕದ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ (Siddaramaiah) ಅವರು ಪಾತ್ರರಾಗಲು ಕೇವಲ ಒಂದೇ ದಿನ ಬಾಕಿ ಇದ್ದು, ದೇವರಾಜ ಅರಸು ಅವರ ದಾಖಲೆಯನ್ನು ನಾಳೆ (ಜನವರಿ 06) ಮುರಿಯಲಿದ್ದಾರೆ. 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು (D Devaraj urs )ಕರ್ನಾಟಕದ ಸಿಎಂ‌ ಆಗಿದ್ದ‌ರು. ಇದೀಗ ಈ ದಾಖಲೆಯನ್ನು ನಾಳೆ ಸಿದ್ದರಾಮಯ್ಯ ಮುರಿಯಲಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಇಂದು (ಜನವರಿ 05) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಜನರ ಅರ್ಶಿವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘವಾದಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ. ನನಗೆ ಖುಷಿ ಏನೆಂದರೆ ದೇವರಾಜ ಅರಸು ಹಾಗೂ ನಾನು ಒಂದೇ ಜಿಲ್ಲೆಯವರು. ನನಗೂ ದೇವರಾಜ ಅರಸ್ ಅವರಿಗೂ ಹೋಲಿಕೆ ಇಲ್ಲ.ಯಾವುದೇ ದಾಖಲೆ ಶಾಶ್ವತವಲ್ಲ. ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ವಿರಾಟ್ ಕೋಹ್ಲಿ ಮುರಿದಿಲ್ಲವೇ? ಮುಂದೆ ಯಾರಾದರೂ ನನ್ನ ದಾಖಲೆಯನ್ನು ಮುರಿಯಬಹುದು. ನನಗಿಂತ ಹೆಚ್ಚಿನ ಬಜೆಟ್ ಮಂಡಿಸುವವರು ಕೂಡ ಬರಬಹುದು. ಹೀಗಾಗಿ ನನ್ನ ದಾಖಲೆಯನ್ನು ಯಾರೂ ಮುರಿಯಲು ಸಾಧ್ಯವಿಲ್ಲ ಎಂದು ನಾನು ಹೇಳುವುದಿಲ್ಲ ಎಂದರು.

ಇದನ್ನೂ ಓದಿ: ರಾಜ್ಯದ ದೀರ್ಘಾವಧಿ ಸಿಎಂ ಆಗಲಿದ್ದಾರೆ ಸಿದ್ದರಾಮಯ್ಯ: ದೇವರಾಜ ಅರಸು​​ ದಾಖಲೆ ನಾಳೆ ಬ್ರೇಕ್​​

Published on: Jan 05, 2026 03:07 PM