ವಕ್ಫ್ ಜಮೀನು ಒತ್ತುವರಿಯನ್ನು ತೆರವುಗೊಳಿಸುವ ಭರವಸೆಯ 2014ರ ಬಿಜೆಪಿ ಪ್ರಣಾಳಿಕೆಯನ್ನು ಓದಿ ಹೇಳಿದ ಸಿದ್ದರಾಮಯ್ಯ
ವಾಲ್ಮೀಕಿ ನಿಗಮದ ಹಗರಣದಲ್ಲಿ ಕ್ಲೀನ್ ಚಿಟ್ ಪಡೆದಿರುವ ಬಿ ನಾಗೇಂದ್ರ ಅವರಿಗೆ ಪುನಃ ಸಚಿವ ಸಂಪುಟದಲ್ಲಿ ಸೇರಿಸಿಕೊಳ್ಳುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈಗ್ಲೇ ಏನೂ ಹೇಳಲ್ಲ, ಚುನಾವಣೆ ಮುಗಿದ ಬಳಿಕ ಆದರ ಬಗ್ಗೆ ಯೋಚಿಸಲಾಗುವುದು ಎಂದರು.
ಬಳ್ಳಾರಿ: ವಕ್ಫ್ ಭೂವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೋಟೀಸ್ಗಳನ್ನು ನೀಡಿದ್ದು ನಿಜ ಆದರೆ ಎಲ್ಲ ನೋಟೀಸ್ ಗಳನ್ನು ವಾಪಸ್ಸು ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿಂದು ಮಾಧ್ಯಮಗೋಷ್ಠಿ ನಡೆಸಿ ಮಾತಾಡಿದ ಅವರು, 2014 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಒತ್ತುವರಿಯಾಗಿರುವ ವಕ್ಫ್ ಜಮೀನುಗಳನ್ನು ಅತಿಕ್ರಮಣಕಾರರಿಂದ ತೆರವುಗೊಳಿಸಲಾಗುವುದು ಅಂತ ನೀಡಿರುವ ಭರವಸೆಯನ್ನು ಓದಿ ಹೇಳಿದರು. ನಾವು ಹಾಗೆ ಹೇಳಿಲ್ಲ ಅಂತ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರೆ ಅವರು ಸುಳ್ಳು ಹೇಳುತ್ತಿದ್ದಾರೆ ಅಂತರ್ಥ ಎಂದು ಅವರು ಹೇಳಿದರು
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಇಕ್ಕಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ, ಕಂದಾಯ ಇಲಾಖೆ ಕಾರ್ಯದರ್ಶಿ ಬರೆದ ಪತ್ರ ತೋರಿಸಿದ ಅಶೋಕ
Latest Videos