AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ? ರಾಜ್ಯಸಭೆ ಆಫರ್​​ ಬಂದರೆ ಸಿಎಂ ನಿಲುವೇನು?

ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ? ರಾಜ್ಯಸಭೆ ಆಫರ್​​ ಬಂದರೆ ಸಿಎಂ ನಿಲುವೇನು?

ಪ್ರಸನ್ನ ಗಾಂವ್ಕರ್​
| Edited By: |

Updated on:May 26, 2026 | 5:13 PM

Share

ಡಿಸಿಎಂ ಮತ್ತು ಸಿಎಂರನ್ನು ಹೈಕಮಾಂಡ್​​ ದೆಹಲಿಗೆ ಜರೆದಿರುವ ಹಿನ್ನೆಲೆ ನಾನಾ ಲೆಕ್ಕಾಚಾರಗಳು ಶುರುವಾಗಿವೆ. ಒಂದೊಮ್ಮೆ ರಾಷ್ಟ್ರ ರಾಜಕಾರಣಕ್ಕೆ ವರಿಷ್ಠರು ಆಹ್ವಾನಿಸದರೆ ತಮ್ಮ ತೀರ್ಮಾನ ಏನು ಎಂಬ ಬಗ್ಗೆ ಸಿದ್ದರಾಮಯ್ಯ ಈಗಾಗಲೇ ಆಪ್ತರಿಗೆ ತಿಳಿಸಿದ್ದಾರೆ. ರಾಜ್ಯಸಭೆ ಆಫರ್ ಬಂದರೂ ತಿರಸ್ಕರಿಸಲು ನಿರ್ಧರಿಸಿದ್ದೇನೆ ಎಂದು ಅವರು ಹೇಳಿದ್ದಾರಂತೆ.

ನವದೆಹಲಿ, ಮೇ 26: ಹೈಕಮಾಂಡ್ ನಾಯಕರೊಂದಿಗೆ ಮೀಟಿಂಗ್ ವಿಚಾರ ಸಂಬಂಧ ರಾಜ್ಯಸಭೆಯ ಆಫರ್ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ ಹಾಕಿದ್ದಾರೆ ಎನ್ನಲಾಗಿದೆ. ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ ಬಂದರೆ ನಿರಾಕರಿಸಲು ಅವರು ನಿರ್ಧರಿಸಿದ್ದು, ಈ ಬಗ್ಗೆ ಇಲ್ಲ ಎಂಬುದೇ ಸಿಎಂ ಉತ್ತರವಾಗಿರುವ ಸಾಧ್ಯತೆ ಇದೆ. ಈ ಬಗ್ಗೆ ಮೊದಲೇ ಆಪ್ತರೊಂದಿಗೆ ಸಿದ್ದರಾಮಯ್ಯ ಚರ್ಚಿಸಿದ್ದು, ರಾಷ್ಟ್ರ ರಾಜಕಾರಣ ಬಗ್ಗೆ ಮನಸ್ಸಿಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: May 26, 2026 05:09 PM
Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More