17 ವರ್ಷಗಳ ಬಳಿಕ ಕಾಂಗ್ರೆಸ್​​ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ

Updated on: May 30, 2026 | 6:46 PM

ಸಿದ್ದರಾಮಯ್ಯ 17 ವರ್ಷಗಳ ನಂತರ ಕಾಂಗ್ರೆಸ್​​ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಕೆಳಗಿಳಿದಿದ್ದು, ಡಿಕೆ ಶಿವಕುಮಾರ್ ನೂತನ ನಾಯಕರಾಗಿ ಆಯ್ಕೆಯಾಗಿದ್ದಾರೆ. ಸಿಎಲ್‌ಪಿ ಸಭೆಯಲ್ಲಿ ಆರಂಭದಲ್ಲಿ ಶಾಸಕರು ಎಐಸಿಸಿ ನಿರ್ಧಾರಕ್ಕೆ ಬದ್ಧ ಎಂದಾಗ ಗೊಂದಲ ಮೂಡಿತ್ತು. ಹೈಕಮಾಂಡ್ ಮಧ್ಯಪ್ರವೇಶಿಸಿ ಸಿದ್ದರಾಮಯ್ಯ ಮನವೊಲಿಸಿದ ನಂತರ ಪ್ರಕ್ರಿಯೆ ಪೂರ್ಣಗೊಂಡಿತು.

ಬೆಂಗಳೂರು, ಮೇ 30: ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸತತ 17 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಸಿದ್ದರಾಮಯ್ಯ ಅವರೀಗ ಪಟ್ಟ ತ್ಯಾಗ ಮಾಡಿದ್ದಾರೆ. ಅವರ ನಂತರ ಹೊಸ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಶಾಸಕಾಂಗ ಪಕ್ಷದ ನಾಯಕರ ಆಯ್ಕೆಗೆ ಮುಂಚಿತವಾಗಿ, ಶಾಸಕರು ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್ ಸಮಿತಿ) ಯಾರ ಹೆಸರನ್ನು ಸೂಚಿಸುತ್ತದೋ ಅದಕ್ಕೆ ತಮ್ಮ ಬೆಂಬಲವಿದೆ ಎಂದು ಹೇಳುವ ಮೂಲಕ ನಿರ್ಧಾರವನ್ನು ಹೈಕಮಾಂಡ್‌ಗೆ ಬಿಟ್ಟರು. ಇದರಿಂದಾಗಿ ಹೈಕಮಾಂಡ್ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಮನವೊಲಿಸುವ ಸವಾಲು ಎದುರಾಯಿತು. ಎಐಸಿಸಿ ನಾಯಕರಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಸಿದ್ದರಾಮಯ್ಯ ಅವರ ಮನವೊಲಿಸುವಲ್ಲಿ ಯಶಸ್ವಿಯಾದರು. ಈ ಮಧ್ಯಸ್ಥಿಕೆಯ ನಂತರ, ಶಾಸಕರು ಕೂಡ ಒಪ್ಪಿಗೆ ನೀಡಿದ್ದರಿಂದ ಡಿಕೆ ಶಿವಕುಮಾರ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಯಿತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More