AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್: ಕಾಂಗ್ರೆಸ್​​​ಗೆ ಎಚ್ಚರಿಕೆ

ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್: ಕಾಂಗ್ರೆಸ್​​​ಗೆ ಎಚ್ಚರಿಕೆ

ಹರೀಶ್ ಜಿ.ಆರ್​.
| Edited By: |

Updated on: May 27, 2026 | 3:45 PM

Share

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಅವರ ನಿವಾಸ ಕಾವೇರಿ ಎದುರು ಅಭಿಮಾನಿಗಳು ಜಮಾಯಿಸಿದ್ದಾರೆ. ವರುಣ, ಚಾಮುಂಡೇಶ್ವರಿ, ಬೀದರ್ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಬಂದಿರುವ ಅಭಿಮಾನಿಗಳು, ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ ಎಂದಿದ್ದಾರೆ. ಪಕ್ಷದ ಅಧಿಕೃತ ನಿರ್ಧಾರಕ್ಕಾಗಿ ಕಾಯುತ್ತಿರುವುದಾಗಿ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಬೆಂಗಳೂರು, ಮೇ 27: ಸದ್ಯ ರಾಜ್ಯ ರಾಜಕಾರಣದಲ್ಲಿ ಪಟ್ಟದಾಟ ಕ್ಲೈಮ್ಯಾಕ್ಸ್​​ಗೆ ತಲುಪಿದೆ. ಸಿಎಂ ಸಿದ್ದರಾಮಯ್ಯ (Siddaramaiah) ನಾಳೆ ರಾಜೀನಾಮೆ ನೀಡಲಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಇತ್ತ ಅಧಿಕೃತ ನಿವಾಸ ಕಾವೇರಿ ಎದುರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ವರುಣ, ಚಾಮುಂಡೇಶ್ವರಿ, ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಅಭಿಮಾನಿಗಳು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ್ದು, ‘ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ‘ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಪಕ್ಷ ಉಳಿಯುವುದಿಲ್ಲ, ನಾವು ಅದಕ್ಕೆ ಬಿಡುವುದಿಲ್ಲ’ ಎಂದು ಅಭಿಮಾನಿಗಳು ಹೇಳಿದ್ದಾರೆ. ಇನ್ನು ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಕೆಲ ಕಾಂಗ್ರೆಸ್ ನಾಯಕರು, ಹೈಕಮಾಂಡ್‌ನಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ ಎಂದಿದ್ದಾರೆ. ಸುರ್ಜೇವಾಲಾ ಅವರು ಬೆಂಗಳೂರಿಗೆ ಬಂದ ನಂತರ ಪರಿಸ್ಥಿತಿಯ ಕುರಿತು ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದು ಗೃಹಸಚಿವ ಜಿ ಪರಮೇಶ್ವರ ಮತ್ತು ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಇತರ ನಾಯಕರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More